ಕುಂದಾಪುರ: ಅತ್ಯಂತ ಸವಾಲಿನ ವೃತ್ತಿಯಾಗಿರುವ ಮೀನುಗಾರಿಕೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಆ ನಿಟ್ಟಿನಲ್ಲಿ ಲೈಫ್ ಜಾಕೆಟ್ಟುಗಳನ್ನು ಕಡ್ಡಾಯವಾಗಿ ಬಳಸಬೇಕು. ಮೀನುಗಾರಿಕೆ ಸಂದರ್ಭ ಅವಘಡಗಳಾಗುವುದನ್ನು ಕಂಡೂ ಕಾಣದಂತಿರುವುದು ಅಪಾಯ ಆಹ್ವಾನಿಸಿಕೊಂಡಂತೆಯೇ ಸರಿ. ಮೀನುಗಾರಿಕೆ ನಿಷೇಧಿತ ಅವಧಿಯಲ್ಲಿ ಪಾಳಿಸಬೇಕಾದ ಕ್ರಮಗಳನ್ನು ಪಾಲಿಸುವುದರ ಜೊತೆಗೆ ಸಂಪ್ರದಾಯಿಕ ಮೀನುಗಾರಿಕೆಯಲ್ಲಿ ಹಾಗೂ ಇನ್ನಿತರ ಕೆಲಸಗಳಲ್ಲಿ ತೊಡಗಿಕೊಳ್ಳುವ ಮೀನುಗಾರ ಬಾಂಧವರು ಅತ್ಯಂತ ಜಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಅವರು ಬೈಂದೂರು ತಾಲೂಕು ಕಚೇರಿ ಪ್ರಜಾಸೌಧದ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರದ ಮೀನುಗಾರರಿಗೆ ಲೈಫ್ ಜಾಕೆಟ್ ವಿತರಿಸಿ ಮಾತನಾಡಿದರು. ಅರ್ಜಿ ಸಲ್ಲಿಸಿದ ಎಲ್ಲರಿಗೂ ಲೈಫ್ ಜಾಕೆಟ್ ವಿತರಿಸಲಾಗಿದೆ. ಕೆಲವು ಕಡೆ ಮೀನುಗಾರರಿಂದ ಲೈಫ್ ಬಾಯ್ ಒದಗಿಸುವಂತೆ ಬೇಡಿಕೆ ಬಂದಿದ್ದು, ಈ ಕುರಿತು ಅಗತ್ಯ ಕ್ರಮವಹಿಸಲು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಮೀನುಗಾರಿಕೆ ಸಹಾಯಕ ನಿರ್ದೇಶಕರು ಹಾಗೂ ಇತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
28/05/2026 12:37 pm
LOADING...