ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಎಪಿ ನಾಯಕನ ಮೇಲೆ ಗುಂಡಿನ ದಾಳಿ - ಆಸ್ಪತ್ರೆಗೆ ದಾಖಲು

ಅಮೃತಸರದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸ್ಥಳೀಯ ನಾಯಕರೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುರುವಾರ ಗುಂಡಿನ ದಾಳಿ ನಡೆಸಿದ್ದು, ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಎಎಪಿ ವಾರ್ಡ್ ಸಂಖ್ಯೆ 42ರ ಉಸ್ತುವಾರಿ ಜೈಪಾಲ್ ಸಿಂಗ್ ಬೌ ಅವರೇ ಗುಂಡಿನ ದಾಳಿಗೆ ಒಳಗಾದ ನಾಯಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕೆಲವು ತಿಂಗಳ ಹಿಂದೆ ಕಾರು ಪಾರ್ಕಿಂಗ್ ವಿಚಾರದಲ್ಲಿ ನೆರೆಹೊರೆಯವರೊಂದಿಗೆ ನಡೆದ ಜಗಳಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಬೌ ಅವರನ್ನು ಕೊಲ್ಲುವ ಉದ್ದೇಶದಿಂದಲೇ ದಾಳಿಕೋರರು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಬೌ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಬೌ ಅವರು ಎಎಪಿಯ ಅಮೃತಸರ ದಕ್ಷಿಣ ಶಾಸಕ ಇಂದರ್ಬೀರ್ ಸಿಂಗ್ ನಿಜ್ಜರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

28/05/2026 06:35 pm

Cinque Terre

15.11 K

Cinque Terre

0