ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಂತೆಯೇ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಪಟ್ಟಕ್ಕೇರುವಿಕೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ ಕೂಡಲೇ, ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಮೇ 29 ರ ಶುಕ್ರವಾರ ಉಪರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸುತ್ತಿರುವ ಕಾರಣ, ರಾಜ್ಯಪಾಲರು ಕಾರ್ಯನಿರತರಾಗಿದ್ದಾರೆ. ಆದರೂ, ಶುಕ್ರವಾರ ಸಂಜೆಯೊಳಗೆ ಸಿದ್ದರಾಮಯ್ಯ ಅವರ ರಾಜೀನಾಮೆ ಅಂಗೀಕಾರವಾಗುವ ನಿರೀಕ್ಷೆಯಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನಡೆಯುವ ಸಾಧ್ಯತೆಗಳಿದ್ದು, ಈ ಸಭೆಯಲ್ಲಿ ಡಿ. ಕೆ. ಶಿವಕುಮಾರ್ ಸಿಎಲ್‌ಪಿ ನಾಯಕರಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಎಲ್ಲವೂ ನಿರೀಕ್ಷೆಯಂತೆ ನಡೆದರೆ, ಸೋಮವಾರ ಸಂಜೆ ಗೋದೂಳಿ ಮುಹೂರ್ತದಲ್ಲಿ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಈ ಐತಿಹಾಸಿಕ ಸಮಾರಂಭವು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಅಥವಾ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಬಹುದು. ದೊಡ್ಡ ಪ್ರಮಾಣದಲ್ಲಿ ಜನರನ್ನು ಸೇರಿಸಿ ಪದಗ್ರಹಣ ಸಮಾರಂಭವನ್ನು ಅದ್ದೂರಿಯಾಗಿ ನಡೆಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.
PublicNext
28/05/2026 07:44 pm
LOADING...