ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹವಾಮಾನ ವೈಪರೀತ್ಯ: ದೆಹಲಿಗೆ ಹೊರಟ ಸಿದ್ದರಾಮಯ್ಯ ವಿಮಾನ ಜೈಪುರದಲ್ಲಿ ತುರ್ತು ಲ್ಯಾಂಡಿಂಗ್

ನವದೆಹಲಿ: ಹೈ ಕಮಾಂಡ್ ನಿರ್ದೇಶನದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ದೆಹಲಿಗೆ ಹೊರಟಿದ್ದ ಅವರ ಈ ಪ್ರಯಾಣ ಮಹತ್ವ ಪಡೆದಿತ್ತು.

ಆದರೆ, ಪ್ರತಿಕೂಲ ಹವಾಮಾನದಿಂದಾಗಿ ದೆಹಲಿಗೆ ತೆರಳಬೇಕಿದ್ದ ಅವರ ವಿಮಾನ ಜೈಪುರದಲ್ಲಿ ಅನಿರೀಕ್ಷಿತವಾಗಿ ಬಂದಿಳಿದಿದೆ.

ಈ ವಿಮಾನದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ, ಸಚಿವರಾದ ಕೆ.ಜೆ.ಜಾರ್ಜ್, ಬೈರತಿ ಸುರೇಶ್, ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಹಾಗೂ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಸೇರಿದಂತೆ ಹಲವು ಪ್ರಮುಖರು ಇದ್ದರು.

Edited By :
PublicNext

PublicNext

28/05/2026 08:55 pm

Cinque Terre

12.09 K

Cinque Terre

0