ಭಟ್ಕಳ: ಪಟ್ಟಣದಲ್ಲಿ ನಡೆದ ಮುರಿನಕಟ್ಟೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಯೂಟ್ಯೂಬರ್ ಅಹ್ಮದ್ ಮುತೀಬ್ ಪೇಶಿಮಾಮ್ ಅವರನ್ನು ಭಟ್ಕಳ ನಗರ ಪೊಲೀಸರು ಬಂಧಿಸಿದ್ದಾರೆ.
ಮುರಿನಕಟ್ಟೆ ವಿಚಾರಕ್ಕೆ ಸಂಬಂಧಿಸಿ ಯೂಟ್ಯೂಬ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನಕಾರಿ ವಿಡಿಯೊ ಹಾಗೂ ಹೇಳಿಕೆಗಳನ್ನು ಹರಿಬಿಟ್ಟ ಆರೋಪ ಅವರ ಮೇಲಿದೆ. ಸಾರ್ವಜನಿಕರ ಭಾವನೆ ಕೆರಳಿಸುವ ರೀತಿಯ ವಿಡಿಯೊಗಳು ಹಾಗೂ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ತನಿಖೆ ವೇಳೆ ಲಭಿಸಿದ ಮಾಹಿತಿಯ ಆಧಾರದ ಮೇಲೆ ಅಹ್ಮದ್ ಮುತೀಬ್ ಪೇಶಿಮಾಮ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮುರಿನಕಟ್ಟೆ ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ಈಗಾಗಲೇ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಕೆಲ ಆರೋಪಿಗಳನ್ನು ಬಂಧಿಸಲಾಗಿದೆ. ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.
PublicNext
29/05/2026 07:50 am
LOADING...