ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಟ್ಕಳ: ಸಿಎಂ ಆಯ್ಕೆ ಬಗ್ಗೆ136 ಶಾಸಕರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ

ಭಟ್ಕಳ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ಅಧಿಕೃತವಾಗಿ ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ತೀವ್ರಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ರಾಜ್ಯದ ಎಲ್ಲಾ 136 ಶಾಸಕರು ಸಂಪೂರ್ಣ ಬದ್ಧರಾಗಿರುತ್ತಾರೆ ಎಂದು ಮೀನುಗಾರಿಕೆ, ಬಂದರು ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸ್ಪಷ್ಟಪಡಿಸಿದರು.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಕುರಿತು ಪ್ರತಿಕ್ರಿಯೆ ನೀಡಿದರು.ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದಿರುವ ಹಿನ್ನೆಲೆ, ಪಕ್ಷದ ವರಿಷ್ಠರ ನಿರ್ಧಾರವೇ ಅಂತಿಮವಾಗಲಿದೆ ಎಂದು ಅವರು ಹೇಳಿದರು.

“ರಾಜ್ಯವನ್ನು ಸಮರ್ಥವಾಗಿ ಮುನ್ನಡೆಸಬಲ್ಲ, ಜನರ ಆಶೋತ್ತರಗಳಿಗೆ ಸ್ಪಂದಿಸುವ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವ ನಾಯಕನನ್ನೇ ಹೈಕಮಾಂಡ್ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿದೆ ಎಂಬ ವಿಶ್ವಾಸ ನಮಗಿದೆ. ಪಕ್ಷದ ಹಿರಿಯ ನಾಯಕರು ಈಗಾಗಲೇ ದೆಹಲಿಗೆ ತೆರಳಿದ್ದಾರೆ.

ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಹೈಕಮಾಂಡ್ ಜೊತೆ ಚರ್ಚೆ ನಡೆಸುತ್ತಿದ್ದಾರೆ. ವರಿಷ್ಠರು ಕೈಗೊಳ್ಳುವ ತೀರ್ಮಾನವನ್ನು ರಾಜ್ಯದ ಎಲ್ಲಾ 136 ಶಾಸಕರು ಗೌರವದಿಂದ ಸ್ವೀಕರಿಸುತ್ತಾರೆ. ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯ ಅಥವಾ ಗೊಂದಲವಿಲ್ಲ,” ಎಂದು ಹೇಳಿದರು.

ಶೀಘ್ರದಲ್ಲೇ ಶಾಸಕಾಂಗ ಪಕ್ಷದ ಸಭೆರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ ಅಥವಾ ಭಾನುವಾರ ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದ ಅವರು, “ಆ ಸಭೆಯಲ್ಲಿ ನಾವೆಲ್ಲ ಶಾಸಕರು ಪಾಲ್ಗೊಳ್ಳುತ್ತೇವೆ. ಹೈಕಮಾಂಡ್ ಪ್ರಕಟಿಸುವ ತೀರ್ಮಾನವನ್ನು ಒಮ್ಮತದಿಂದ ಸ್ವಾಗತಿಸಿ ಬೆಂಬಲಿಸುತ್ತೇವೆ,” ಎಂದರು.

ಕ್ಷೇತ್ರದ ಜನರ ಸೇವೆಯೇ ಮುಖ್ಯದೆಹಲಿ ರಾಜಕಾರಣ, ಸಚಿವ ಸಂಪುಟ ಪುನರ್‌ರಚನೆ ಅಥವಾ ಲಾಬಿ ಕುರಿತ ಪ್ರಶ್ನೆಗೆ ಉತ್ತರಿಸಿದ ಮಂಕಾಳ ವೈದ್ಯ, ತಮ್ಮ ಮೊದಲ ಆದ್ಯತೆ ಕ್ಷೇತ್ರದ ಜನರೇ ಎಂದು ಹೇಳಿದರು.“ನಾನು ಇಂದು ಸಚಿವನಾಗಿ ಕೆಲಸ ಮಾಡುತ್ತಿರುವುದಕ್ಕೆ ನನ್ನ ಭಟ್ಕಳ–ಹೊನ್ನಾವರ ಕ್ಷೇತ್ರದ ಜನರ ಆಶೀರ್ವಾದವೇ ಕಾರಣ. ಜನರು ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದರಿಂದಲೇ ಮಂತ್ರಿಯಾಗುವ ಅವಕಾಶ ದೊರೆತಿದೆ. ಹೀಗಾಗಿ ನನಗೆ ದೆಹಲಿಯ ರಾಜಕಾರಣಕ್ಕಿಂತ ನನ್ನ ಕ್ಷೇತ್ರದ ಜನರ ಕೆಲಸ ಮಾಡುವುದು ಮುಖ್ಯ. ನಾನು ಲಾಬಿ ಮಾಡಲು ಬೇರೆಡೆಗೆ ಹೋಗುವುದಿಲ್ಲ. ಕ್ಷೇತ್ರದಲ್ಲೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ,” ಎಂದು ಹೇಳಿದರು.ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ ಮಂಕಾಳ ವೈದ್ಯ ನೀಡಿರುವ ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

ಹೈಕಮಾಂಡ್ ಅಂತಿಮ ನಿರ್ಧಾರ ಪ್ರಕಟಿಸುವವರೆಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರಲ್ಲಿ ತೀವ್ರ ಕುತೂಹಲ ಮುಂದುವರಿದಿದೆ.

Edited By :
PublicNext

PublicNext

29/05/2026 08:31 pm

Cinque Terre

8.73 K

Cinque Terre

0

ಸಂಬಂಧಿತ ಸುದ್ದಿ