ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಅವಘಡ - ವಸ್ತುಗಳು ಸುಟ್ಟು ಕರಕಲು

ಮೂಡಲಗಿ: ಬೃಹತ್ ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಹೊತ್ತಿ ಉರಿದಿದ್ದು ಕೋಟಿ ರೂ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಲಿಂಗ ಪಾಟೀಲ ಅವರಿಗೆ ಸೇರಿದ ಎಸ್ ಎಮ್ ಕೆ ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ.‌ ಪಕ್ಕದಲ್ಲೇ ಪೆಟ್ರೋಲ್ ಬಂಕ್ ಇರುವುದರಿಂದ ಭಾರಿ ಅನಾಹುತ ತಪ್ಪಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By : Somashekar
PublicNext

PublicNext

30/05/2026 01:09 pm

Cinque Terre

6.52 K

Cinque Terre

0

ಸಂಬಂಧಿತ ಸುದ್ದಿ