ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಯ ಸತ್ಯ ಪ್ರತಿಪಾದನಾ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟ ಸ್ಥಳಕ್ಕೆ ವಿರೋಧ ಪಕ್ಷದ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಭೇಟಿ ನೀಡಿ, ಬೆಂಬಲ ಸೂಚಿಸಿದರು.
ಇದೇ ವೇಳೆ ಮಾತನಾಡಿದ ಅವರು, ಹಿರಿಯ ನ್ಯಾಯವಾದಿ ಹಾಗೂ ಹೋರಾಟಗಾರ ಬಿ.ಡಿ ಹಿರೇಮಠ ಅವರು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಕ್ಕೆ ಹೊಸ ಶಕ್ತಿ ತುಂಬಿ ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿಯಲ್ಲಿ ನಿರಂತರ ಪ್ರಯತ್ನ ಮಾಡಿದ್ದೇವೆ. ಈಗಲೂ ಪ್ರಯತ್ನ ಮಾಡುತ್ತೇನೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ನಾವು ಈಗ ಬದ್ಧರಾಗಿದ್ದೇವೆ. ನಮ್ಮ ನಾಯಕರಾದ ಪ್ರಹ್ಲಾದ ಜೋಶಿ ಅವರು ಸಹ ಧಾರವಾಡ ಮಹಾನಗರ ಪಾಲಿಕೆ ಹೋರಾಟಕ್ಕೆ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಮಾಜಿ ಶಾಸಕಿ ಸೀಮಾ ಮಸೂತಿ, ಮಾಜಿ ಮಹಾಪೌರ ಶಿವು ಹಿರೇಮಠ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ, ಮಹಾದೇವ ಹೋರಟ್ಟಿ, ವೆಂಕಟೇಶ ಮಾಚಕನೂರ, ಮನೋಜ ಪಾಟೀಲ, ಸಿ.ಎಸ್. ನೇಗಿನಾಳ ಇದ್ದರು.
Kshetra Samachara
30/05/2026 02:22 pm
LOADING...