ಸಾಗರ: ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಡಾ. ಪ್ರತಿಭಾ .ಆರ್. ಅವರು ಶನಿವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರ 'ಟೈಮ್ಸ್ ಆಫ್ ಸಾಗರ' ಮಾಧ್ಯಮದೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ ಸಾರ್ವಜನಿಕರು ಹಾಗೂ ರೈತರ ಸಮಸ್ಯೆಗಳಿಗೆ ಶೀಘ್ರವಾಗಿ ಮತ್ತು ಪ್ರಾಮಾಣಿಕವಾಗಿ ಸ್ಪಂದಿಸಿ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ, ಜನಸೇವೆಯನ್ನು ಯಶಸ್ವಿಯಾಗಿ ಮುನ್ನಡೆಸಲು ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.
ಮೂಲತಃ ತುಮಕೂರು ಜಿಲ್ಲೆಯವರಾದ ಡಾ. ಪ್ರತಿಭಾ .ಆರ್. ಅವರು ಈ ಹಿಂದೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ತಹಶೀಲ್ದಾರರಾಗಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿಯೂ ತಹಶೀಲ್ದಾರರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆ ಹಾಗೂ ಜನಮನ್ನಣೆಯನ್ನು ಗಳಿಸಿದ್ದಾರೆ. ಅವರ ಈ ಆಡಳಿತಾತ್ಮಕ ಅನುಭವವು ಈಗ ಸಾಗರ ತಾಲ್ಲೂಕಿನ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ನಿವಾರಣೆಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಜಮೀಲ್ ಸಾಗರ್ “ಪಬ್ಲಿಕ್ ನೆಕ್ಸ್ಟ್ ಸಾಗರ"
Kshetra Samachara
30/05/2026 04:30 pm
LOADING...