ಶಿವಮೊಗ್ಗ : ಮಾಸಿಕ ಸರಾಸರಿ 36 ಸಾವಿರ ರೂಪಾಯಿ ಕನಿಷ್ಠವೇತನ ನಿಗಧಿ ಮಾಡುವಂತೆ ಆಗ್ರಹಿಸಿ, ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ಸರ್ಕಾರವು ಕನಿಷ್ಠವೇತನವನ್ನು ಪರಿಷ್ಕರಿಸಿ, ಪ್ರತಿ ಉದ್ದಿಮೆಗೆ ಪ್ರತ್ಯೇಕವಾಗಿ ಕನಿಷ್ಠವೇತನ ನಿಗಧಿಮಾಡದೆ ಬಹುತೇಕ ಉದ್ದಿಮೆಗಳಿಗೆ ಏಕರೂಪವಾಗಿ ಹಾಗೂ ಹಿಂದೆ ಇದ್ದ ನಾಲ್ಕು ವಲಯಕ್ಕೆ ಬದಲಾಗಿ, ಮೂರು ವಲಯಗಳಾಗಿ ಮಾಡಿ, ಮೇ22 ರಂದು ಹೊರಡಿಸಿರುವ ಕನಿಷ್ಠವೇತನದ ಅಂತಿಮ ಅಧಿಸೂಚನೆಯನ್ನು ಸಿಐಟಿಯು ಸ್ವಾಗತಿಸುತ್ತದೆ. ಇದರ ಜೊತೆಗೆ ಅದರಲ್ಲಿರುವ ನ್ಯೂನತೆಗಳನ್ನು ಸರಿಪಡಿಸಬೇಕೆಂದು ಆಗ್ರಹಿಸುತ್ತದೆ ಎಂದು ತಿಳಿಸಲಾಗಿದೆ.
Kshetra Samachara
30/05/2026 07:55 pm
LOADING...