ಭಟ್ಕಳ: ತಾಲೂಕಿನ ಗೋಳಿಕುಂಬ್ರಿ ಉತ್ತರಕೊಪ್ಪ ಗ್ರಾಮದಲ್ಲಿ ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಲತಾ ವಿಷ್ಣು ನಾಯ್ಕ್ (44) ಎಂದು ಗುರುತಿಸಲಾಗಿದೆ. ಅವರು ಕೆಲ ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಮನೆಯಿಂದ ಹೊರಗೆ ಹೋದ ಲತಾ ಅವರು, ಮನೆಯ ಸಮೀಪದ ಜಮೀನಿನಲ್ಲಿರುವ ಕುಡಿಯುವ ನೀರಿನ ಬಾವಿಗೆ ಕಾಲು ಜಾರಿ ಬಿದ್ದಿದ್ದಾರೆ. ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಮೃತೆಯ ಪತಿ ವಿಷ್ಣು ನಾಯ್ಕ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
PublicNext
30/05/2026 10:18 pm
LOADING...