ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : 6 ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು.!

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಆರು ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋ, ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಸರಣಿ ಅಪಘಾತದಲ್ಲಿ ಮೊದಲಿಗೆ ಥಾರ್ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಮುಂಭಾಗದಲ್ಲಿದ್ದ ಲಾರಿಗೆ ಅಪ್ಪಳಿಸಿದೆ. ಈ ಭೀಕರ ಅಪಘಾತದಲ್ಲಿ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಡಿಕ್ಕಿಯ ತೀವ್ರತೆಗೆ ಆಟೋ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Edited By :
PublicNext

PublicNext

31/05/2026 05:44 pm

Cinque Terre

11.82 K

Cinque Terre

0