ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಈ ಘಟನೆ ಮೀನುಗಾರರ ವಲಯದಲ್ಲಿ ಆತಂಕ ಸೃಷ್ಟಿಸಿದೆ.
ಅಂಕೋಲದ ಬೆಳಂಬಾರ ಕಡಲತೀರದಿಂದ ಮೀನುಗಾರಿಕೆಗೆ ಹೊರಟಿದ್ದ ಮಂಜುನಾಥ್ ಖಾರ್ವಿ ಎಂಬುವವರ ಮಾಲೀಕತ್ವದ 'ಶ್ರೀ ನವರತ್ನ' ಹೆಸರಿನ ಬೋಟ್, ಹೊನ್ನಾವರದ ತಾರೇಬಾಗಿಲು ಸಮೀಪ ಮೀನುಗಾರಿಕೆ ನಡೆಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೋಟಿನ ಹೊರಭಾಗಕ್ಕೆ ಹಾನಿಯಾದ ಕಾರಣ ಒಳಗೆ ನೀರು ತುಂಬಿ ಬೋಟ್ ಸಂಪೂರ್ಣವಾಗಿ ಮುಳುಗಡೆಯಾಗಿದೆ.
ಬೋಟ್ ಮುಳುಗಡೆಯಾಗುತ್ತಿದ್ದಂತೆ, ಸ್ಥಳೀಯ ಮೀನುಗಾರಿಕಾ ಬೋಟ್‌ನಲ್ಲಿದ್ದ ಇಕ್ಬಾಲ್ ಅಬ್ದುಲ್ ಗಫೂರ್ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ತಮ್ಮ ಬೋಟ್‌ನ ಸಹಾಯದಿಂದ ಏಳು ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ರಕ್ಷಿಸಲ್ಪಟ್ಟ ಮೀನುಗಾರರ ಹೆಸರುಗಳು: ವೆಂಕಟೇಶ್ ಖಾರ್ವಿ, ನಾಗಪ್ಪ ಖಾರ್ವಿ, ಸಂದೀಪ್ ಖಾರ್ವಿ, ವಿಕಾಸ್ ಖಾರ್ವಿ, ವಿಘ್ನೇಶ್ ಖಾರ್ವಿ, ರಜತ್ ಬಾಣಾವಳಿಕರ್ ಹಾಗೂ ಲತೇಶ್ ಖಾರ್ವಿ.
ಬೋಟ್ ಮುಳುಗಡೆಯಿಂದ ಅಂದಾಜು 50 ಲಕ್ಷ ರೂಪಾಯಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಈ ಘಟನೆ ಸಂಬಂಧ ಹೊನ್ನಾವರ ಸಿಎಸ್‌ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
PublicNext
31/05/2026 06:39 pm
LOADING...