ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: “ಸಿದ್ದರಾಮಯ್ಯ ಬೆನ್ನಿಗೆ ಸತೀಶ್ ಜಾರಕಿಹೊಳಿ ಚೂರಿ” - ಆಧಾರರಹಿತ ಪೋಸ್ಟ್ ವಿರುದ್ಧ ಪ್ರಕರಣ ದಾಖಲು.!

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಪ್ರಕಟಿಸಿದ ಆರೋಪದ ಮೇಲೆ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಪ್ರಕಟಿಸಿದ ಆರೋಪದ ಮೇಲೆ ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಕರುನಾಡ ಕುರುಬ ಗೌಡ್ರು' ಎಂಬ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಈ ಸುಳ್ಳು ಪೋಸ್ಟ್ ಪ್ರಕಟವಾಗಿತ್ತು. ಈ ಪೋಸ್ಟ್‌ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು. ಅಷ್ಟೇ ಅಲ್ಲದೆ, ಸಿದ್ದರಾಮಯ್ಯ ಅವರ ವಿರುದ್ಧ 37 ಶಾಸಕರ ಸಹಿ ಸಂಗ್ರಹಿಸಿದ್ದಾರೆ ಎಂಬ ಆಧಾರರಹಿತ ವದಂತಿಯನ್ನೂ ಹರಡಲಾಗಿತ್ತು.

ಸತೀಶ್ ಜಾರಕಿಹೊಳಿ ಅವರ ಹೆಸರಿಗೆ ಧಕ್ಕೆ ತರುವ ದುರುದ್ದೇಶದಿಂದಲೇ ಈ ಸುಳ್ಳು ಆರೋಪಗಳನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ಸ್ಪಷ್ಟಪಡಿಸಲಾಗಿದೆ. ಇದು ಸಾರ್ವಜನಿಕರಲ್ಲಿ ಗೊಂದಲ ಮತ್ತು ಅಶಾಂತಿ ಸೃಷ್ಟಿಸುವ ಪ್ರಯತ್ನ ಎಂದು ಆರೋಪಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಬೆಳಗಾವಿ ಸಿಇಎನ್ ಪೊಲೀಸರು, ಸುಳ್ಳು ಮಾಹಿತಿ ಹರಡಿದವರನ್ನು ಪತ್ತೆ ಹಚ್ಚಲು ತನಿಖೆಯನ್ನು ಆರಂಭಿಸಿದ್ದಾರೆ.

Edited By :
PublicNext

PublicNext

31/05/2026 07:11 pm

Cinque Terre

9.5 K

Cinque Terre

0

ಸಂಬಂಧಿತ ಸುದ್ದಿ