ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

"ಸಿದ್ದರಾಮಯ್ಯ ಎಂದೂ ದ್ವೇಷ ರಾಜಕಾರಣ ಮಾಡಿದವರಲ್ಲ": ಯತ್ನಾಳ್ ಪ್ರಶಂಸೆ

ವಿಜಯಪುರ: ರಾಜ್ಯ ರಾಜಕೀಯದಲ್ಲಿ ಅಚ್ಚರಿ ಮೂಡಿಸುವ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. "ಸಿದ್ದರಾಮಯ್ಯ ಅವರು ಎಂದೂ ದ್ವೇಷ ರಾಜಕಾರಣ ಮಾಡಿದವರಲ್ಲ" ಎಂದು ಯತ್ನಾಳ್ ಹೇಳಿದ್ದಾರೆ.

ಡಿಕೆಶಿ ಸಿಎಂ ಆದರೆ ಬಿಜೆಪಿಗೆ ಖುಷಿ!

ಇದೇ ವೇಳೆ ಡಿ.ಕೆ. ಶಿವಕುಮಾರ್ ಕುರಿತು ಮಾತನಾಡಿದ ಯತ್ನಾಳ್, "ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆದರೆ ಅವರಿಗಿಂತ ಹೆಚ್ಚು ಖುಷಿ ಪಡುವುದು ಬಿಜೆಪಿ ರಾಜ್ಯಾಧ್ಯಕ್ಷರು" ಎಂದು ವ್ಯಂಗ್ಯವಾಡಿದ್ದಾರೆ.

ಯತ್ನಾಳ್ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್ ಮಾಡಿದ್ದು ಮತ್ತು ಡಿ.ಕೆ. ಶಿವಕುಮಾರ್ ಸಿಎಂ ಆಗುವ ಬಗ್ಗೆ ಬಿಜೆಪಿಗೆ ಖುಷಿ ಇದೆ ಎಂದಿರುವುದು ಹೊಸ ಚರ್ಚೆಗೆ ಗ್ರಾಸವಾಗಿದೆ.

Edited By : Abhishek Kamoji
PublicNext

PublicNext

31/05/2026 10:59 pm

Cinque Terre

2.78 K

Cinque Terre

0

ಸಂಬಂಧಿತ ಸುದ್ದಿ