ಅಹಮದಾಬಾದ್: ಐಪಿಎಲ್ 2026ರ ಟೂರ್ನಿಯ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮಾರಕ ಬೌಲಿಂಗ್ ದಾಳಿ ಹಾಗೂ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ಎಸೆತಗಳು ಬಾಕಿ ಇರುವಂತೆ 5 ವಿಕೆಟ್ ಗಳಿಂದ ಗೆದ್ದು ಬೀಗಿದೆ.
ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡವು 156 ರನ್ ಗಳ ಗುರಿ ನೀಡಿತ್ತು. ಇದಕ್ಕೆ ಉತ್ತರವಾಗಿ ಆರ್ ಸಿಬಿ 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ರೋಚಕ ಗೆಲವು ಸಾಧಿಸಿದೆ. ಈ ಮೂಲಕ ಆರ್ ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ತಂಡದ ಪರ ವಿರಾಟ್ ಕೊಹ್ಲಿ ಅಜೇಯ 75 ರನ್ ವೆಂಕಟೇಶ್ ಅಯ್ಯರ್ 32 ರನ್, ರಜತ್ ಪಾಟಿದಾರ್ 15 ರನ್ ಗಳಿಸಿ ತಂಡದ ಗೆಲುವಿಗೆ ಶ್ರಮಿಸಿದರು.
PublicNext
31/05/2026 11:31 pm
LOADING...