ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಪಿಎಲ್ ಸಂಭ್ರಮದಲ್ಲಿ ಗಲಾಟೆ: ಆರ್‌ಸಿಬಿ ವಿಜಯೋತ್ಸವ ವೇಳೆ ಎರಡು ಗುಂಪುಗಳ ನಡುವೆ ಹೊಡೆದಾಟ

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಆರ್‌ಸಿಬಿ ತಂಡ ಸತತ ಎರಡನೇ ಬಾರಿ ಐಪಿಎಲ್ ಕಪ್ ಗೆದ್ದ ಸಂಭ್ರಮಾಚರಣೆಯ ವೇಳೆ ಎರಡು ಯುವಕರ ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ವರದಿಯಾಗಿದೆ. ತಂಡದ ಗೆಲುವಿನ ಸಂಭ್ರಮದಲ್ಲಿ ಭಾಗವಹಿಸಿದ್ದ ಯುವಕರು ಪರಸ್ಪರ ವಾಗ್ವಾದ ನಡೆಸಿದ್ದು, ಅದು ಬಳಿಕ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಯುವಕರು ಹೊಡೆದಾಡಿಕೊಂಡ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Edited By : Nirmala Aralikatti
PublicNext

PublicNext

01/06/2026 11:14 am

Cinque Terre

5.4 K

Cinque Terre

0

ಸಂಬಂಧಿತ ಸುದ್ದಿ