ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಶಾಲಾ ಮಕ್ಕಳ ಜೀವಕ್ಕೆ ಆಪತ್ತು: ರಸ್ತೆ ಬದಿಯ ಅಕ್ರಮ ಪಾರ್ಕಿಂಗ್!

ಮಂಗಳೂರು: ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೂರ್ನಡ್ಕ ಮತ್ತು ಮರೀಲ್ ಪ್ರದೇಶಗಳಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಘನ ವಾಹನಗಳ ಅಕ್ರಮ ಪಾರ್ಕಿಂಗ್‌ನಿಂದಾಗಿ ಶಾಲಾ ಮಕ್ಕಳು ತೀವ್ರ ತೊಂದರೆ ಎದುರಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಲಾರಿ, ಪಿಕಪ್ ಮೊದಲಾದ ವಾಹನಗಳನ್ನು ರಸ್ತೆಯ ಇಕ್ಕೆಲಗಳಲ್ಲಿ ನಿಲ್ಲಿಸಿರುವುದರಿಂದ ಪಾದಚಾರಿಗಳಿಗೆ, ವಿಶೇಷವಾಗಿ ಶಾಲೆಗೆ ತೆರಳುವ ಮಕ್ಕಳಿಗೆ ನಡೆದಾಡಲು ತೀವ್ರ ಅಡಚಣೆಯಾಗುತ್ತಿದೆ ಎಂದು ವಿದ್ಯಾರ್ಥಿಗಳ ಪೋಷಕರು ದೂರಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಗೆ ಗಮನಹರಿಸಿ ಸೂಕ್ತ ಪರಿಹಾರ ಒದಗಿಸುವಂತೆ ಅವರು ಒತ್ತಾಯಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

01/06/2026 03:01 pm

Cinque Terre

1.09 K

Cinque Terre

0

ಸಂಬಂಧಿತ ಸುದ್ದಿ