ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ತೋಟಗಾರಿಕೆ ಇಲಾಖೆ ವಿವಿಧ ಸೌಲಭ್ಯ, ಸಹಾಯಧನಕ್ಕೆ ಅರ್ಜಿ ಆಹ್ವಾನ

ಕುಂದಗೋಳ : ತೋಟಗಾರಿಕೆ ಇಲಾಖೆಯಲ್ಲಿ 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹಣ್ಣು (ಬಾಳೆ, ಪಪ್ಪಾಯ, ಮಾವು), ಹೂ (ಗುಲಾಬಿ, ಸೇವಂತಿಗೆ, ಸುಗಂಧರಾಜ, ಚೆಂಡು ಹೂ), ಹೈಬ್ರಿಡ್ ತರಕಾರಿಗಳ ಹೊಸ ಪ್ರದೇಶ ವಿಸ್ತರಣೆ, ಸಾಂಬಾರು ಬೆಳೆ ಪ್ರದೇಶ ವಿಸ್ತರಣೆ, ಸುಗಂಧಿ ದ್ರವ್ಯಗಳ ಪ್ರದೇಶ ವಿಸ್ತರಣೆ, ಪುನಶ್ಚೇತನ ಕಾರ್ಯಕ್ರಮ, ಪ್ಲಾಸ್ಟಿಕ್ ಮಲ್ಚಿಂಗ್, ಎರೆಹುಳು ಘಟಕ, ಜೇನು ಸಾಕಾಣಿಕೆ, ಸಣ್ಣ ಟ್ರ್ಯಾಕ್ಟರ್, ತಳ್ಳುವ ಗಾಡಿ, ಈರುಳ್ಳಿ ಶೇಖರಣಾ ಘಟಕಗಳಿಗೆ ರೈತರಿಗೆ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ಜೂನ್ 15, 2026 ರೊಳಗಾಗಿ ಕುಂದಗೋಳ ತಾಲೂಕಿನ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಉಮೇಶ್ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ.

Edited By :
Kshetra Samachara

Kshetra Samachara

01/06/2026 04:15 pm

Cinque Terre

8.05 K

Cinque Terre

0

ಸಂಬಂಧಿತ ಸುದ್ದಿ