ಉಡುಪಿ: ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಗಣೇಶ್ ( 32 ) ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಪೊಲೀಸ್ ಅಧೀಕ್ಷಕರ ವರದಿಯ ಮೇರೆಗೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗೂಂಡಾ ಗಣೇಶ್ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ, ಕಳ್ಳತನ ಪ್ರಕರಣಗಳು ದಾಖಲಾಗಿರುತ್ತವೆ. ಅವುಗಳ ಪೈಕಿ 03 ಪ್ರಕರಣಗಳು ಖುಲಾಸೆ, 04 ಪ್ರಕರಣ ನ್ಯಾಯಾಂಗ ವಿಚಾರಣೆ ಹಾಗೂ ಉಳಿದ 2 ಪ್ರಕರಣಗಳು ತನಿಖೆಯಲ್ಲಿವೆ.
ಬಂಧಿತ ಆರೋಪಿಯನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.
Kshetra Samachara
01/06/2026 05:22 pm
LOADING...