ಹುಬ್ಬಳ್ಳಿ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಉದ್ದೇಶದಿಂದ ಹುಬ್ಬಳ್ಳಿಯ ಡಾ. ಆರ್. ಬಿ ಪಾಟೀಲ್ ಮಹೇಶ್ ಪಿಯು ಸೈನ್ಸ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡುವ ಮೂಲಕ ಮುಂದಿನ ಎರಡು ವರ್ಷಗಳ ಪಿಯುಸಿ ಶಿಕ್ಷಣದ ಬಗ್ಗೆ ಸಮಗ್ರ ಮಾಹಿತಿ ನೀಡುವುದರ ಜೊತೆಗೆ ಕಳೆದ ವರ್ಷ ರ್ಯಾಂಕ್ ಬಂದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಸತ್ಕಾರ ಮಾಡಿದರು.
ಎಸ್... ಹುಬ್ಬಳ್ಳಿಯ ಡಾ. ಆರ್.ಬಿ ಪಾಟೀಲ್ ಮಹೇಶ್ ಪಿಯು ಸೈನ್ಸ್ ಕಾಲೇಜಿನಲ್ಲಿ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗಾಗಿ ವಿಶೇಷ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ಪಿಯುಸಿ ಶಿಕ್ಷಣದ ಮಹತ್ವ, ಅಧ್ಯಯನದ ವಿಧಾನ, ಪರೀಕ್ಷಾ ಸಿದ್ಧತೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾರ್ಗದರ್ಶನ ನೀಡಿದರು. ಕಳೆದ ಹಲವು ವರ್ಷಗಳಿಂದ ಅತ್ಯುತ್ತಮ ಫಲಿತಾಂಶಗಳನ್ನು ದಾಖಲಿಸಿರುವ ಕಾಲೇಜು, ಗುಣಮಟ್ಟದ ಶಿಕ್ಷಣ ಹಾಗೂ ಅನುಭವಿ ಶಿಕ್ಷಕರ ಮೂಲಕ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಿದೆ.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದು, ಒತ್ತಡ ನಿರ್ವಹಣೆ, ಸಮಯದ ಸದ್ಬಳಕೆ ಹಾಗೂ ಗುರಿ ಸಾಧನೆಗೆ ಅಗತ್ಯವಾದ ಕೌಶಲ್ಯಗಳ ಕುರಿತು ಮಾಹಿತಿ ನೀಡಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿಗೆ ಪೂರಕವಾಗುವಂತಹ ಮಾರ್ಗದರ್ಶನ ನೀಡುವ ಮೂಲಕ ಓರಿಯೆಂಟೇಷನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿಗಳು ತಮ್ಮ ಗುರಿಯತ್ತ ಆತ್ಮವಿಶ್ವಾಸದಿಂದ ಸಾಗಲು ಈ ಕಾರ್ಯಕ್ರಮ ನೆರವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/06/2026 05:45 pm
LOADING...