ಹುಬ್ಬಳ್ಳಿ : ತಿರುಮಲಕೊಪ್ಪ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಆರ್.ವಾಯ್.ಹೊಸಮನಿ ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ.
ಹೌದು ! ಹುಬ್ಬಳ್ಳಿ ತಾಲೂಕು ಅಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಕೊಪ್ಪ ಗ್ರಾಮದಲ್ಲಿ ನರೇಗಾ ಕಾಮಗಾರಿ, ಸಿಸಿ ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ ಸೇರಿದಂತೆ ಹಲವಾರು ಆರೋಪಗಳನ್ನು ತಿರುಮಲಕೊಪ್ಪ ಗ್ರಾಮದ ಜನ ಎತ್ತಿದ್ದರು.
ಈ ವಿಷಯ ಪಬ್ಲಿಕ್ ನೆಕ್ಸ್ಟ್ ಮಾಧ್ಯಮದಲ್ಲೂ ಪ್ರಸಾರ ಆಗಿತ್ತು, ಸದ್ಯ ಇತ್ತೀಚೆಗೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಆರ್.ವಾಯ್.ಹೊಸಮನಿ, ಗುಪ್ತಚರ ಇಲಾಖೆ ಅಧಿಕಾರಿ ಕುಮಾರ್ ಭಾಗವಾಡ ಅವರು ಗ್ರಾಮಕ್ಕೆ ಭೇಟಿ ಕೊಟ್ಟು ಜನರ ಸಮಸ್ಯೆ ಆಲಿಸಿದ್ದಾರೆ.
ಒಟ್ಟಾರೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳೇ ತಿರುಮಲಕೊಪ್ಪ ಗ್ರಾಮದಲ್ಲಿ ನಡೆದಿದೆ ಎನ್ನಲಾದ 1.50 ಕೋಟಿ ಅವ್ಯವಹಾರ ಬಗ್ಗೆ ತನಿಖೆ ಯಾವಾಗ ಎಂಬುದು ಜನರ ಪ್ರಶ್ನೆಯಾಗಿದೆ.
ಶ್ರೀಧರ ಪೂಜಾರ, ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
Kshetra Samachara
01/06/2026 06:30 pm
LOADING...