ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು: ಪೆಟ್ರೋಲ್, ಡೀಸೆಲ್, ಅನಿಲ ಬೆಲೆ ಏರಿಕೆ ವಿರೋಧಿಸಿ ಸಿಪಿಐ ಮಾಸ್ ಲೀಗ್ ಪ್ರತಿಭಟನೆ

ಮಡಿಕೇರಿ: ಪೆಟ್ರೋಲ್ ಡೀಸೆಲ್ ಅನಿಲ ಬೆಲೆ ಏರಿಕೆ ವಿರೋಧಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಮಾಸ್ ಲೀಗ್ ಸಂಘಟನೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಂಘಟನೆಯ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇದೇ ಸಂದರ್ಭದ ಸಂಘಟನೆಯ ಪ್ರಮುಖರು ಮಾತನಾಡಿ ದೇಶದ ಎಲ್ಲೆಡೆ ನಮ್ಮ ಪಕ್ಷದಿಂದ ಎಲ್ಲಾ ಕಡೆ ಪ್ರತಿಭಟನೆ ನಡೆಸಲಾಗುತ್ತಿದೆ.ಕೇಂದ್ರ ಸರ್ಕಾರ ಕೇವಲ ಧರ್ಮದ ವಿಚಾರದಲ್ಲಿ ರಾಜಕೀಯ ನಡೆಸುತ್ತಿದೆ.

ಬೆಲೆ ಏರಿಕೆ ಮಾಡಿರುವ ಬಗ್ಗೆ ಯಾರು ಮಾತನಾಡುತ್ತಿಲ್ಲ ಇದರಿಂದಾಗಿ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆ ಆಗುತ್ತಿದೆ.ಬಡವರು ದಿನ ನಿತ್ಯ ಬೆಲೆ ಏರಿಕೆ ಆದರೆ ಹೇಗೆ ಬದುಕು ನಡೆಸುವುದು.

ಯುದ್ಧದ ಸಂದರ್ಭದಲ್ಲಿ ತೊಂದರೆಯನ್ನು ಅನುಭವಿಸಿರುವುದು ಜನವರ್ಗದವರು.ಯುದ್ಧ ನಿಲ್ಲಿಸಲು ಮೋದಿ ಅವರಿಗೆ ಆಗುತ್ತದೆ ಆದರೆ ಟ್ರಂಪ್ ಅವರನ್ನು ಅಪ್ಪಿಕೊಂಡು ಯುದ್ಧಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ ಹೀಗಾಗಿ ಬಡವರ್ಗದ ಜನರಿಗೆ ಜೀವನ ನಿರ್ವಹಣೆ ಮಾಡಲು ಕಷ್ಟ ಸಾಧ್ಯವಾಗದೆ ಎಂದು ತಿಳಿಸಿದರು.

ಇದೇ ಅಪರ ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು..

Edited By : Somashekar
PublicNext

PublicNext

01/06/2026 06:41 pm

Cinque Terre

10.84 K

Cinque Terre

0

ಸಂಬಂಧಿತ ಸುದ್ದಿ