ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೂನ್ 3 ರಂದು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಅನುಮತಿ ನಿರಾಕರಣೆ - ಪೊಲೀಸ್ ಆಯುಕ್ತ ಎನ್ ಶಶಿಕುಮಾರ್

ಧಾರವಾಡ : ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಜೂನ್ 3 ರಂದು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ತಿಳಿಸಿದರು.

ಧಾರವಾಡ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡದ ಶ್ರೀನಗರ ವೃತ್ತದಿಂದ ಪ್ರತಿಭಟನೆ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸದಸ್ಯರು ಹೋರಾಟಕ್ಕೆ ಅನುಮತಿ ಕೇಳಿದ್ದಾರೆ.

ಸಮರ್ಪಕ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ಅನುಮತಿ ನೀಡಿಲ್ಲ, ಈಗಾಗಲೇ ಎರಡು ಬಾರಿ ನಾವು ಅನುಮತಿ ನಿರಾಕರಿಸಿದ್ದೇವೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಕಾನೂನು ಉಲ್ಲಂಘಿಸಿಲ್ಲ, ಈ ಬಾರಿಯೂ ಹೋರಾಟ ಹಮ್ಮಿಕೊಳ್ಳದೇ ಸಹಕರಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

Edited By : Somashekar
Kshetra Samachara

Kshetra Samachara

01/06/2026 06:49 pm

Cinque Terre

19.85 K

Cinque Terre

1

ಸಂಬಂಧಿತ ಸುದ್ದಿ