ಅಥಣಿ: ರಾಜ್ಯದಾದ್ಯಂತ ಹೊಸ ಶೈಕ್ಷಣಿಕ ವರ್ಷದ ಶಾಲಾ ಆರಂಭೋತ್ಸವ ಸಂಭ್ರಮದಿಂದ ನಡೆಯಿತು. ಸುದೀರ್ಘ ಬೇಸಿಗೆ ರಜೆಯ ಬಳಿಕ ಶಾಲೆಗೆ ಮರಳಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಆರತಿ ಬೆಳಗಿ, ಹೂವು ಹಾಗೂ ಸಿಹಿ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲೂ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಆರಂಭವನ್ನು ವಿಶೇಷವಾಗಿ ಆಚರಿಸಲಾಯಿತು. ಶಾಲೆಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ, ಸಿಹಿ ಹಂಚುವ ಮೂಲಕ ಸಂತಸದಿಂದ ಬರಮಾಡಿಕೊಂಡರು.
ಹೊಸ ಶೈಕ್ಷಣಿಕ ವರ್ಷದ ಅಂಗವಾಗಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಏಕಕಾಲದಲ್ಲಿ ಮಹಾ ಪೋಷಕ-ಶಿಕ್ಷಕರ ಸಭೆ ನಡೆಯಿತು. ಸಂಬರಗಿ ಸರ್ಕಾರಿ ಶಾಲೆಯಲ್ಲೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಶಿಕ್ಷಣ, ಕಲಿಕಾ ಪ್ರಗತಿ ಹಾಗೂ ಶಾಲೆಯ ಅಭಿವೃದ್ಧಿ ಕುರಿತು ಚರ್ಚಿಸಿದರು. ಶಾಲಾ ವಾತಾವರಣದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಮಕ್ಕಳ ಮುಖದಲ್ಲಿ ಹೊಸ ಕಲಿಕಾ ವರ್ಷದ ಉತ್ಸಾಹ ಮತ್ತು ಸಂತಸ ಸ್ಪಷ್ಟವಾಗಿ ಕಂಡುಬಂತು.
PublicNext
01/06/2026 06:54 pm
LOADING...