ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ನಿಗದಿತ ಅವಧಿಯಲ್ಲಿ ಎಸ್ಐಆರ್ ಪೂರ್ಣಗೊಳಿಸಿ - ಪಾಲಿಕೆ ಆಯುಕ್ತ ಕಾರ್ತಿಕ್ ಎಂ

ಬೆಳಗಾವಿ : ಚುನಾವಣಾ ಆಯೋಗದ ಆದೇಶದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಾರಂಭ ಮಾಡಲಾಗಿದ್ದು ನಿಗದಿತ ಅವಧಿಯಲ್ಲಿಯೇ ಕಾರ್ಯಪೂರ್ಣಗೊಳ್ಳಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.

ಪಾಲಿಕೆ ಕಚೇರಿಯಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಇಲ್ಲಿಯವರೆಗೆ ಆಗಿರುವ ಪ್ರಗತಿಯ ಕುರಿತು ಸಿಬ್ಬಂದಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಉತ್ತರ ದಕ್ಷಿಣ ಎರಡು ವಿಭಾಗಗಳಿದ್ದು, ದಕ್ಷಿಣಕ್ಕೆ ಚುನಾವಣಾ ಅಧಿಕಾರಿಯಾಗಿ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ ಅವರು, ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಂದಾಯ ವಿಭಾಗದ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಹಾಗೂ ಉತ್ತರ ಭಾಗದ ಚುನಾವಣಾ ಅಧಿಕಾರಿಯಾಗಿ ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ತಳವಾರ, ಸಹ ಚುನಾವಣಾ ಅಧಿಕಾರಿಯಾಗಿ ಅಭಿಯಂತರರಾದ ಲಕ್ಷ್ಮೀ ನಿಪ್ಪಾಣಿಕರ್ ನೇಮಕಗೊಂಡಿದ್ದಾರೆ.

40 ಮೇಲ್ವಿಚಾರಕರ ಮಾರ್ಗದರ್ಶನದಲ್ಲಿ ಉತ್ತರ ದಕ್ಷಿಣ ಸೇರಿ ಒಟ್ಟು 514 ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸುವರು. ಈಗಾಗಲೇ ಉತ್ತರದಲ್ಲಿ ಶೇ. 72.02, ದಕ್ಷಿಣದಲ್ಲಿ ಶೇ. 82.66 ರಷ್ಟು ಮ್ಯಾಪಿಂಗ್ ಕಾರ್ಯ ಮುಗಿದಿದ್ದು, ಶೇ.90 ರಷ್ಟು ಗುರಿ ತಲುಪಿದ್ದು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೂ. 30ರಿಂದ ಆಯಾ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯ ಆರಂಭ ಮಾಡಲಿದ್ದಾರೆ ಎಂಬ ಮಾಹಿತಿ ನೀಡಿದರು.

Edited By : Nagaraj Tulugeri
PublicNext

PublicNext

01/06/2026 08:08 pm

Cinque Terre

9.58 K

Cinque Terre

0

ಸಂಬಂಧಿತ ಸುದ್ದಿ