ಧಾರವಾಡ: ಪಕ್ಷಾತೀತವಾಗಿ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟವನ್ನು ಜೋಳಿಗೆ ಹಿಡಿದು ಮುಂದುವರಿಸುತ್ತೇವೆ ಎಂದು ಹೋರಾಟಗಾರ ಹಾಗೂ ಹಿರಿಯ ನ್ಯಾಯವಾದಿ ಬಿ.ಡಿ. ಹಿರೇಮಠ ತಿಳಿಸಿದರು.
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಯ ಸತ್ಯ ಪ್ರತಿಪಾದನಾ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಶಿಫಾರಸಿಗೆ ಅನುಮೋದನೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಜೂನ್ 9 ರ ವರೆಗೆ ಗಡುವು ನೀಡಲಾಗಿದೆ.
ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಪಕ್ಷಾತೀತವಾಗಿ ಹೋರಾಟಕ್ಕೆ ಬೆಂಬಲ ಸೂಚಿಸುವ ಸಂಘ ಸಂಸ್ಥೆಗಳಿಗೆ ವೇದಿಕೆ ಮುಕ್ತವಾಗಿದೆ. ಈಗಾಗಲೇ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಬಿಟ್ಟಿದ್ದೇವೆ.
ಆದರೆ ಸತ್ಯ ಪ್ರತಿಪಾದನಾ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದ ಮುಂದುವರಿಯಲಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಆಗುವವರೆಗೂ ಈ ಹೋರಾಟ ನಿಲ್ಲುವುದಿಲ್ಲ, ಜೋಳಿಗೆ ಹಿಡಿದು ಈ ಹೋರಾಟ ಮುಂದುವರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರರು ಪಕ್ಷದ ಮುಖಂಡರು ಇಲ್ಲಿಗೆ ಬಂದರೆ ಸ್ವಾಗತ. ಆದರೆ ಯಾರು ಯಾವುದೇ ಕಾರಣಕ್ಕೂ ರಾಜಕೀಯ ಲಾಭಕ್ಕಾಗಿ ಈ ಹೋರಾಟ ಬಳಸಿಕೊಳ್ಳಬಾರದು. ರಾಜ್ಯ ಸರ್ಕಾರ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಮಾಡುವ ವಿಶ್ವಾಸವಿದೆ. ಹೋರಾಟ ಯಶಸ್ಸಿನತ್ತ ಸಾಗುತ್ತಿದೆ ಎಂದು ತಿಳಿಸಿದರು.
ವರದಿ: ಮಂಜುನಾಥ ಕವಳಿ, ಪಬ್ಲಿಕ್ ನೆಕ್ಸ್ಟ್ ಧಾರವಾಡ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/06/2026 10:56 pm
LOADING...