ಮುಲ್ಕಿ : ತಾಲೂಕಿನ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆಯಲ್ಲಿ ಚಿರತೆಯೊಂದು ಮನೆಯ ಆವರಣದಿಂದ ನಾಯಿಯನ್ನು ಎಳೆದೊಯ್ದ ಘಟನೆ ನಡೆದಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ದಾಮಸ್ಕಟ್ಟೆಯ ತಾಳಿಪಾಡಿ ಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಪಕ್ಕದ ಮನೆಯೊಂದರ ಬಳಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿದೆ. ಮನೆಯ ಆವರಣದಲ್ಲಿದ್ದ ನಾಯಿಯ ಮೇಲೆ ದಾಳಿ ನಡೆಸಿದ ಚಿರತೆ ಅದನ್ನು ಎಳೆದೊಯ್ದಿದೆ. ನಾಯಿಯನ್ನು ಎಳೆದೊಯ್ಯುವ ಚಿರತೆಯ ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಘಟನೆ ನಡೆದ ಕೂಡಲೇ ಮನೆಯವರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ. ಈ ಭಾಗದಲ್ಲಿ ಚಿರತೆಯ ಉಪಟಳ ಹೆಚ್ಚಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಕೂಡಲೇ ಬೋನು ಅಳವಡಿಸುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
PublicNext
02/06/2026 07:17 am
LOADING...