ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಅನ್ನದಾತನ ಆಕ್ರೋಶ - ಹೆಸ್ಕಾಂ ವಿರುದ್ಧ ರೈತರ ಪ್ರತಿಭಟನೆ

ಹುಬ್ಬಳ್ಳಿ: ರೈತರ ಜೊತೆಗೆ ವಿದ್ಯುತ್ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದು,‌ ಇದರಿಂದಾಗಿ ಬೇಸತ್ತು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಅನ್ನದಾತರು ವಿನೂತನ ಹೋರಾಟದ ಮೂಲಕ ಹುಬ್ಬಳ್ಳಿಯ ತಬೀಬ್‌ ಲ್ಯಾಂಡ್ ನಲ್ಲಿರುವ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಎತ್ತಿನ ಬಂಡಿ ಮತ್ತು ಟ್ರ್ಯಾಕ್ಟರ್ ಮೂಲಕ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಸಾವಿರಾರು ರೈತರು, ಸಮರ್ಪಕ ವಿದ್ಯುತ್‌ಗಾಗಿ ನಮ್ಮ ಹೋರಾಟ, ರೈತರ ಹಕ್ಕಿಗಾಗಿ ಒಗ್ಗಟ್ಟಿನ ಆರ್ಭಟ ಎಂಬ ಧ್ಯೇಯವಾಕ್ಯದೊಂದಿಗೆ ಹೋರಾಟ ನಡೆಸುತ್ತಿದ್ದಾರೆ. ಕೃಷಿ ಭೂಮಿಗೆ ಸರಿಯಾದ ಸಮಯಕ್ಕೆ ಮತ್ತು ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಬೆಳೆದ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವೆ‌. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬೆಳೆ ಬೆಳೆಗಳು ಹಾಳಾಗಿ ಹೊರಟಿವೆ. ರೈತರು ಕಣ್ಣೀರಲ್ಲಿ ಕೈ ತೊಳೆಯುವಂತ ಪರಿಸ್ಥಿತಿಯನ್ನ ಹೆಸ್ಕಾಂ ಅಧಿಕಾರಿಗಳು ತಂದಿಟ್ಟಿದ್ದಾರೆ. ಅಧಿಕಾರಿಗಳಿಗೆ ಮತ್ತು ಸರ್ಕಾರಕ್ಕೆ ಹಲವು ಬಾರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿ ತಾಲೂಕಿನ ಮಾವನೂರ, ಗಿರಿಯಾಲ, ಕಟ್ನೂರ, ಇನಾಂ ವೀರಾಪುರ, ಕರಡಿಕೊಪ್ಪ, ಬೆಳಗಲಿ, ಬೊಮ್ಮಸಮುದ್ರ ಸೇರಿದಂತೆ ಹತ್ತಾರೂ ಗ್ರಾಮದಿಂದ ಆಗಮಿಸಿದ ರೈತರಿಂದ ಪ್ರತಿಭಟನೆ ನಡೆಸಿದ್ದು, ಸಮರ್ಪಕ ವಿದ್ಯುತ್ ಪೂರೈಕೆ ಮಾಡುವವರೆಗೂ ಪ್ರತಿಭಟನೆ ಕೈಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

02/06/2026 03:00 pm

Cinque Terre

18.27 K

Cinque Terre

0

ಸಂಬಂಧಿತ ಸುದ್ದಿ