ಮಂಗಳೂರು: ಮೊಬೈಲ್ ನೋಡಿದ್ದಕ್ಕೆ ತಾಯಿ ಬುದ್ಧಿ ಮಾತು ಹೇಳಿದ್ದಕ್ಕೆ ಮನೆಯಿಂದ ಹೊರಹೋಗಿದ್ದ ಬಾಲಕ ಮರಳಿ ಬಾರದೆ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಕನ್ನಡ, ಶಿರಸಿ ನಿವಾಸಿ ಸಲ್ಮಾ (40) ಎಂಬವರ ಸದ್ಯ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ಪತಿ ಹಾಗೂ ಪುತ್ರನೊಂದಿಗೆ ವಾಸವಾಗಿದ್ದರು. ಮೇ 30ರಂದು ಬೆಳಗ್ಗೆ ಸಲ್ಮಾ ತಮ್ಮ ಪುತ್ರ ಸೈಯದ್ ಆಲಿ ಸೈಯದ್ ಗೌಸ (16) ಎಂಬಾತನಿಗೆ, ಮೊಬೈಲ್ ನೋಡುತ್ತಿರುವ ವಿಚಾರದಲ್ಲಿ ತಾಯಿ ಬೈದು ಬುದ್ಧಿಮಾತು ಹೇಳಿದ್ದರು.
ಸ್ವಲ್ಪ ಹೊತ್ತಿನ ಬಳಿಕ ಮನೆಯಿಂದ ಹೊರಹೋಗಿರುತ್ತಾನೆ. ಆತನು ಮರಳಿ ಮನೆಗೆ ಹಿಂತಿರುಗಿದಿದ್ದು, ಆತನ ಗೆಳೆಯರಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಸುತ್ತಮುತ್ತಲಿನ ಪರಿಸರದಲ್ಲಿ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ.
ಈ ಬಗ್ಗೆ ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 73/2026, ಕಲಂ: 137 (2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Kshetra Samachara
02/06/2026 03:01 pm
LOADING...