ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟಿ ತ್ವಿಶಾ ಶರ್ಮಾ ಸಾವು ಪ್ರಕರಣ : ಪತಿ, ಅತ್ತೆಗೆ 14 ದಿನ ನ್ಯಾಯಾಂಗ ಬಂಧನ

ಭೋಪಾಲ್: ಮಾಡೆಲ್ ಹಾಗೂ ನಟಿ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ವರದಕ್ಷಿಣೆ ಕಿರುಕುಳದ ಆರೋಪ ಎದುರಿಸುತ್ತಿರುವ ಅವರ ಪತಿ ಸಮರ್ಥ್ ಸಿಂಗ್ ಮತ್ತು ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯವು ಜೂನ್ 16ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸಿಬಿಐ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಂಗಳವಾರ (ಜೂನ್ 2) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ವರದಕ್ಷಿಣೆ ಕಿರುಕುಳದ ಆರೋಪ ಎದುರಿಸುತ್ತಿರುವ ಅವರ ಪತಿ ಸಮರ್ಥ್ ಸಿಂಗ್ ಮತ್ತು ಅತ್ತೆ ಗಿರಿಬಾಲಾ ಸಿಂಗ್ ಅವರನ್ನು ವಿಶೇಷ ಸಿಬಿಐ ನ್ಯಾಯಾಲಯವು ಜೂನ್ 16ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಎರಡೂ ಕಡೆಯ ವಕೀಲರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ತ್ವಿಶಾ ಶರ್ಮಾ ಪರ ವಕೀಲ ಅನುರಾಗ್ ಶ್ರೀವಾಸ್ತವ್ ಅವರು ಜಬಲ್ಪುರ ಕೋರ್ಟ್ ಆವರಣದಲ್ಲಿ ಸಮರ್ಥ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಮರ್ಥ್ ಸಿಂಗ್ ಅವರ ತಾಯಿ ಗಿರಿಬಾಲಾ ಸಿಂಗ್ ಆರೋಪಿಸಿದರು. ಆದರೆ, ಈ ಆರೋಪವನ್ನು ನಿರಾಕರಿಸಿದ ವಕೀಲ ಶ್ರೀವಾಸ್ತವ್, ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುವಂತೆ ಸವಾಲು ಹಾಕಿದರು. ಅಲ್ಲದೆ, ಜಬಲ್ಪುರದಲ್ಲಿ ವಿಚಾರಣೆ ನಡೆಯುವಾಗ ಸಮರ್ಥ್ ಸಿಂಗ್ ಎಲ್ಲಿದ್ದರು ಎಂದೂ ಪ್ರಶ್ನಿಸಿದರು.

ಈ ಮಧ್ಯೆ, ತ್ವಿಶಾ ಶರ್ಮಾ ಪ್ರಕರಣದ ಪ್ರಮುಖ ಸಾಕ್ಷಿ ನೀರಜ್ ದುಬೆ ಮೇಲೆ ಆರೋಪಿ ಸಮರ್ಥ್ ಸಿಂಗ್ ಸ್ನೇಹಿತರು ಹಲ್ಲೆ ನಡೆಸಿರುವ ವಿಡಿಯೋವೊಂದು ವೈರಲ್ ಆಗಿದೆ. ಮೇ 30ರಂದು ಭೋಪಾಲ್‌ನಲ್ಲಿ ನಾಲ್ಕೈದು ಮಂದಿ ನೀರಜ್ ದುಬೆ ಅವರನ್ನು ಸುತ್ತುವರಿದು ಹಲ್ಲೆ ನಡೆಸಿದ್ದರು. ಘಟನೆ ನಡೆದ ತಕ್ಷಣ ದುಬೆ ಅವರು ಕಟಾರಾ ಹಿಲ್ಸ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ತನಿಖೆಯ ಭಾಗವಾಗಿ, ಸೋಮವಾರ (ಜೂನ್ 1) ಅಧಿಕಾರಿಗಳು ಸಮರ್ಥ್ ಸಿಂಗ್ ಮತ್ತು ಗಿರಿಬಾಲಾ ಸಿಂಗ್ ಅವರನ್ನು ಘಟನೆ ನಡೆದ ಸ್ಥಳಕ್ಕೆ ಕರೆದೊಯ್ದು, ಡಮ್ಮಿಗಳನ್ನು ಬಳಸಿ ಅಪರಾಧ ಮರುಸೃಷ್ಟಿ ಮಾಡಿಸಿದರು. ಮೇ 12ರ ರಾತ್ರಿ ನಡೆದ ಘಟನೆಗಳ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಸಿಬಿಐ ಈ ಹಿಂದೆ ಸಮರ್ಥ್ ಸಿಂಗ್ ಮತ್ತು ಗಿರಿಬಾಲಾ ಸಿಂಗ್‌ಗೆ ಸೂಚಿಸಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Edited By :
PublicNext

PublicNext

02/06/2026 06:52 pm

Cinque Terre

16.69 K

Cinque Terre

0

ಸಂಬಂಧಿತ ಸುದ್ದಿ