ಬೆಳಗಾವಿ: ಉತ್ತರ ಕರ್ನಾಟಕದ ಏಕೈಕ ಮುಸ್ಲಿಂ ಶಾಸಕ ಆಸೀಫ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕಿತ್ತೂರು ಕರ್ನಾಟಕ ಅಲ್ಪಸಂಖ್ಯಾತರ ಒಕ್ಕೂಟದಿಂದ ಆಗ್ರಹಿಸಲಾಗಿದೆ.
ಬೆಳಗಾವಿಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಒಕ್ಕೂಟದಿಂದ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮುಖಂಡರು, 18 ಜಿಲ್ಲೆಗಳ ಏಕೈಕ ಮುಸ್ಲಿಂ ಶಾಸಕ ಆಸೀಫ್ ಸೇಠ್ ಅವರು, ಉತ್ತರ ಕರ್ನಾಟಕದ ಮುಸ್ಲಿಂ ನಾಯಕರಿಗೆ ಕಳೆದ ಇಪ್ಪತ್ತು ವರ್ಷಗಳಿಂದ ಸಚಿವ ಸ್ಥಾನ ಸಿಕ್ಕಿಲ್ಲ. ಆಸೀಫ್ ಸೇಠ್‌ಗೆ ಸಚಿವ ಸ್ಥಾನ ನೀಡದಿದ್ದರೆ ಅನ್ಯಾಯ ಆಗುತ್ತದೆ.
ಹೊಸ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಬೆಳಗಾವಿಯಲ್ಲಿ ಕಿತ್ತೂರು ಕರ್ನಾಟಕದ ಮುಸ್ಲಿಂ ಸಮಾಜದಿಂದ ಸರ್ಕಾರಕ್ಕೆ ಸ್ಪಷ್ಟ ಸಂದೇಶ ರವಾನಿಸಲಾಯಿತು.
ಕಿತ್ತೂರು ಕರ್ನಾಟಕ ಅಲ್ಪಸಂಖ್ಯಾತರ ಒಕ್ಕೂಟದಿಂದ ಆಸೀಫ್ ಸೇಠ್ ಸಚಿವ ಸ್ಥಾನಕ್ಕಾಗಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ನಿಯೋಗ ಕೊಂಡೊಯ್ಯಲು ನಿರ್ಧಾರಿಸಲಾಗಿದೆ.
Kshetra Samachara
02/06/2026 09:01 pm
LOADING...