ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಡಿ.ಕೆ ಶಿವಕುಮಾರ್ ಪದಗ್ರಹಣ - ಹೆಚ್.ಡಿ ದೇವೇಗೌಡ ಮುಖ್ಯ ಅತಿಥಿ!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಈ ಮಹತ್ವದ ಕಾರ್ಯಕ್ರಮಕ್ಕೆ ಹಲವು ರಾಜ್ಯ ಮತ್ತು ರಾಷ್ಟ್ರಮಟ್ಟದ ಗಣ್ಯರನ್ನು ಆಹ್ವಾನಿಸಲಾಗಿದೆ.

ದೇವೇಗೌಡರ ಜೊತೆಗೆ, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಸೇರಿದಂತೆ ಹಲವು ಪ್ರಮುಖ ನಾಯಕರಿಗೂ ಆಮಂತ್ರಣ ಕಳುಹಿಸಲಾಗಿದೆ.

ಇದೇ ವೇಳೆ, ನೆರೆಯ ರಾಜ್ಯಗಳ ಪ್ರಮುಖ ನಾಯಕರೂ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ, ಹಾಗೂ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಕ್ವಿಂದರ್ ಸಿಂಗ್ ಮತ್ತು ಉಪಮುಖ್ಯಮಂತ್ರಿ ಮುಖೇಶ್ ಅವರಿಗೆ ಆಹ್ವಾನ ನೀಡಲಾಗಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಆಂಧ್ರಪ್ರದೇಶದ ವೈ.ಎಸ್. ಶರ್ಮಿಳಾ ರೆಡ್ಡಿ ಸೇರಿದಂತೆ ಸುಮಾರು 35ಕ್ಕೂ ಹೆಚ್ಚು ವಿವಿಐಪಿಗಳಿಗೆ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಆಮಂತ್ರಣ ಕಳುಹಿಸಲಾಗಿದೆ.

Edited By : Nagaraj Tulugeri
PublicNext

PublicNext

02/06/2026 10:44 pm

Cinque Terre

8.66 K

Cinque Terre

1

ಸಂಬಂಧಿತ ಸುದ್ದಿ