ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಜೂನ್ 30 ರಿಂದ ಮತದಾರರ ಪಟ್ಟಿ ಪರಿಷ್ಕರಣೆ - ನಿಮ್ಮ ಹಕ್ಕು ಭದ್ರಪಡಿಸಿಕೊಳ್ಳಿ!

ತುಮಕೂರು: ಜೂನ್ 30 ರಿಂದ ಆರಂಭವಾಗಲಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026. ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳು ನೀಡುವ ಗಣತಿ ನಮೂನೆ ಭರ್ತಿ ಮಾಡಿ ಸಲ್ಲಿಸಿದಲ್ಲಿ ಮಾತ್ರ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರಲಿದೆ. ಮತದಾರರು ತಪ್ಪದೆ ನಮೂನೆ ಭರ್ತಿ ಮಾಡಿ ತಮ್ಮ ಮತಗಟ್ಟೆ ಅಧಿಕಾರಿಗಳಿಗೆ ಅವಧಿಯೊಳಗೆ ಸಲ್ಲಿಸುವಂತೆ ತಿಳಿಸಿದ್ದಾರೆ.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಸಂಬಂಧ ನಗರದ ಕೇಂದ್ರ ಗ್ರಂಥಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು, ಜೂನ್ ೨೦ ರಿಂದ 29ರವರೆಗೆ ತರಬೇತಿ, ನಮೂನೆಗಳ ಮುದ್ರಣ ಇತ್ಯಾದಿ ತಯಾರಿಗಳನ್ನು ಮಾಡಿಕೊಂಡು ಜೂನ್ 30 ರಿಂದ ಜುಲೈ 29 ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರರ ಪಟ್ಟಿಯ ಮಾಹಿತಿಯ ಗಣತಿ ನಮೂನೆಯನ್ನು ನೀಡಲಿದ್ದಾರೆ. 2025 ರ ಮತದಾರರ ಪಟ್ಟಿಯಲ್ಲಿರುವಂತೆ ಸಂಬಂಧಿಸಿದ ಮಾಹಿತಿ ಈಗಾಗಲೇ ಮುದ್ರಣವಾಗಿರುತ್ತದೆ. ಉಳಿದ ಮಾಹಿತಿಯನ್ನು ನಿಗದಿತ ಅವಧಿಯಲ್ಲಿ ಆ ಮನೆಯ ಮತದಾರರು ತುಂಬಿ ನಿರ್ದಿಷ್ಟ ದಾಖಲೆಯೊಂದಿಗೆ ಮರಳಿ ಮತಗಟ್ಟೆ ಅಧಿಕಾರಿಗೆ ನೀಡಬೇಕು. ಒಂದೊಮ್ಮೆ ಅದನ್ನು ಸಲ್ಲಿಸದಿದ್ದಲ್ಲಿ ಅವರ ಹೆಸರು ಅಂತಿಮ ಮತದಾರರ ಪಟ್ಟಿಯಿಂದ ಹೊರಗುಳಿಯಲಿದೆ ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ಒಂದು ನಿರಂತರ ಪ್ರಕ್ರಿಯೆ, ಅಲ್ಲಿ ಕೇವಲ ಮತದಾರರ ಹೆಸರು ಸೇರ್ಪಡೆ, ತೆಗೆಯುವುದು ಹಾಗೂ ವಿಳಾಸ ಬದಲಾವಣೆ ನಡೆಯುತ್ತದೆ. ಯಾವೊಬ್ಬ ಮತದಾರರೂ ಮತದಾನದಿಂದ ಹೊರಗುಳಿಯಬಾರದು ಹಾಗೂ ಪ್ರತಿಯೊಬ್ಬರಿಗೂ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಯಲ್ಲಿ ಭಾಗವಹಿಸುವ ಅವಕಾಶ ದೊರಕಿಸುವಂತೆ ಮಾಡುವ ಉದ್ದೇಶದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಈ ಪ್ರಕ್ರಿಯೆ ದೇಶದಲ್ಲಿ ಇದೇ ಮೊದಲಲ್ಲ ಹಾಗೂ ಕರ್ನಾಟಕದಲ್ಲಿ ಕೂಡ 2002ರಲ್ಲಿ ಸಮಗ್ರ ಪರಿಷ್ಕರಣೆ ಆಗಿದ್ದು ಈಗ 2026 ರಲ್ಲಿ ಮಾಡಲಾಗುತ್ತಿದೆ. ಇದು ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯದ ಎಲ್ಲ ಜಿಲ್ಲಾ ಚುನಾವಣಾಧಿಕಾರಿಗಳಿಗೆ ತರಬೇತಿ ನೀಡಿದ್ದು, ಅದರಂತೆ ತುಮಕೂರು ಜಿಲ್ಲೆಯಲ್ಲಿ ಕೂಡ ಈ ಪ್ರಕ್ರಿಯೆ ನಡೆಯಲಿದೆ ಎಂದು ಅವರು ವಿವರಿಸಿದರು.

ಅದರಂತೆ ಅಕ್ಟೋಬರ್ 1 ರಂದು ಅರ್ಹತಾ ದಿನಾಂಕ ಪ್ರಕಟಿಸಲಿದ್ದು, ಜೂನ್ 30 ರಿಂದ ಜುಲೈ 26 ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ ಮನೆ ಭೇಟಿ, ಜುಲೈ 29 ರಂದು ಮತಗಟ್ಟೆಗಳ ಕ್ರಮಬದ್ಧಗೊಳಿಸುವಿಕೆ, ಆಗಸ್ಟ್ 5 ಮತದಾರರ ಪಟ್ಟಿ ಕರಡು ಪ್ರಕಟ, ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ಆಕ್ಷೇಪಣೆಗಳಿಗೆ ಅವಕಾಶ ಹಾಗೂ ಆಗಸ್ಟ್ 5 ರಿಂದ ಅಕ್ಟೋಬರ್ 3 ರವರೆಗೆ ಆಕ್ಷೇಪಣೆಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಹಾಗೂ ಅಂತಿಮವಾಗಿ ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ ಒಟ್ಟು 2356 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಎಲ್ಲೆಡೆ ಮತಗಟ್ಟೆ ಅಧಿಕಾರಿಗಳು ಇರಲಿದ್ದಾರೆ. 2026 ರ ಮತದಾರರ ಪಟ್ಟಿಯಂತೆ ಜಿಲ್ಲೆಯ ಒಟ್ಟು 11 ವಿಧಾನಸಭಾ ಕ್ಷೇತ್ರಗಳಲ್ಲಿ ಪುರುಷ ಹಾಗೂ ಮಹಿಳೆಯರು ಸೇರಿ ಒಟ್ಟು 22.98.096 ಮತದಾರರಿದ್ದು, ಈ ಎಲ್ಲ ಮತದಾರರ ಗಣತಿಯೂ ಸಮಗ್ರ ಪರಿಷ್ಕರಣೆಯಲ್ಲಿ ಆಗಲಿದೆ. ಈ ಅವಧಿಯಲ್ಲಿ ಮತದಾರರ ಪಟ್ಟಿಯಲ್ಲಿದ್ದು, ಮೃತಪಟ್ಟವರ ಹೆಸರು ಕೈಬಿಡುವ, ೧೮ ತುಂಬಿರುವ ಹೊಸ ಮತದಾರರನ್ನು ಸೇರ್ಪಡೆಗೊಳಿಸುವ ಹಾಗೂ ಸ್ಥಳಾಂತರಗೊಂಡ ಮತದಾರರು ಸೇರಿದಂತೆ ಸಂಪೂರ್ಣ ಪಟ್ಟಿಯ ಸಮಗ್ರ ಪರಿಷ್ಕರಣೆ ಈ ಹಂತದಲ್ಲಿ ಆಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಗಣತಿ ನಮೂನೆ ಸಲ್ಲಿಕೆಯ ನಂತರ ಕರಡು ಪಟ್ಟಿಯಲ್ಲಿ ಎಲ್ಲ ಮತಗಟ್ಟೆ, ಗ್ರಾಮ ಪಂಚಾಯ್ತಿ ವಾರ್ಡುಗಳು, ನಗರ ಸ್ಥಳೀಯ ಸಂಸ್ಥೆಗಳ ವಾರ್ಡುಗಳಲ್ಲಿ ಹಾಗೂ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಈ ಹಂತದಲ್ಲಿ ಮಾಹಿತಿ ತಪ್ಪಾಗಿದ್ದರೆ, ಬಿಟ್ಟು ಹೋಗಿದ್ದರೆ ಆಕ್ಷೇಪಣಾ ಅವಧಿಯಲ್ಲಿ ತಮ್ಮ ಆಕ್ಷೇಪಣೆಯನ್ನು ಮತದಾರರು ಸಲ್ಲಿಸಬಹುದು. ಇದಕ್ಕಾಗಿ ಎರಡು ತಿಂಗಳ ಕಾಲಾವಧಿ ಇರುವುದರಿಂದ ಯಾವ ಮತದಾರರೂ ಪಟ್ಟಿಯಿಂದ ಬಿಟ್ಟು ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು.

ಹೊಸ ಮತದಾರರ ನೋಂದಣಿ ಅಥವಾ ವರ್ಗಾವಣೆ ಸಂದರ್ಭದಲ್ಲಿ ನಮೂನೆ 6/8 ತುಂಬುವುದಾದಲ್ಲಿ ನಿರ್ದಿಷ್ಟಪಡಿಸಿರುವ 12 ದಾಖಲೆಗಳಲ್ಲಿ ಒಂದನ್ನು ಘೋಷಣಾ ನಮೂನೆಯೊಂದಿಗೆ ಸ್ವಯಂ ದೃಢೀಕರಿಸಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾರರ ಭಾಗವಹಿಸುವಿಕೆ ಚಟುವಟಿಕೆಯ ಮುಖ್ಯಸ್ಥರೂ ಆದ ಬಿ.ವಿ.ಅಶ್ವಿಜ ಅವರು ಮಾತನಾಡಿ, ಮತದಾರರ ಜಾಗೃತಿ ಸಂಬಂಧಿಸಿದಂತೆ ಜಿಲ್ಲಾದ್ಯಂತ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿವೆ. ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಹಾಗೂ ಶಾಲಾ ಹಂತದಲ್ಲಿ ಮತದಾರರ ಜಾಗೃತಿ ಕ್ಲಬ್‌ಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

03/06/2026 09:56 am

Cinque Terre

4.11 K

Cinque Terre

0

ಸಂಬಂಧಿತ ಸುದ್ದಿ