ಹಾಸನದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಪದವಿ ಓದುತ್ತಿರುವ ಆರೋಪಿಯು, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಲ್ಲಿಂದ ವಾಪಸ್ ಕರೆದುಕೊಂಡು ಬರುವಾಗ, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆರೋಪಿಯ ಬೆದರಿಕೆಯಿಂದ ತೀವ್ರವಾಗಿ ಹೆದರಿದ ಬಾಲಕಿ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದಿದ್ದಾಳೆ. ಇದರಿಂದ ಆಕೆಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಪೊಲೀಸರ ಪ್ರಕಾರ, ಆರೋಪಿಯು ಪದವಿ ವಿದ್ಯಾಭ್ಯಾಸದ ಜೊತೆಗೆ ಪಾನಿಪುರಿ ಅಂಗಡಿಯನ್ನೂ ನಡೆಸುತ್ತಿದ್ದನು. ಸದ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯಕ್ಕೆ ಆರೋಪಿಗೆ ನೆರವು ನೀಡಿದ ಇತರ ಇಬ್ಬರು ಸ್ನೇಹಿತರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಈ ಸಂಬಂಧ ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/06/2026 01:00 pm
LOADING...