ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನೇಮಕ ಶೇಂಗಾ ಪುಠಾಣಿ ತರಾ ಆಗಿವೆ - ಐಎಮ್ ತೋರಗಲ್ ಆರೋಪ

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳ ನೇಮಕ ವಿಚಾರ ಕಾಂಗ್ರೆಸ್ ಪಕ್ಷದೊಳಗೆ ಹೊಸ ವಿವಾದಕ್ಕೆ ಕಾರಣವಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿ, ಹಣದ ಪ್ರಭಾವದ ಆಧಾರದ ಮೇಲೆ ಹುದ್ದೆಗಳನ್ನು ನೀಡಲಾಗಿದೆ ಎಂದು ಮುಸ್ಲಿಂ ಮುಖಂಡ ಹಿರಿಯ ಚಿಂತಕ ಐ ಎಮ್ ತೋರಗಲ್ ಆರೋಪ ಮಾಡಿದರು.

ಪಕ್ಷದ ಸಂಘಟನೆಗಾಗಿ ವರ್ಷಗಳ ಕಾಲ ದುಡಿದ ಕಾರ್ಯಕರ್ತರನ್ನು ಕಡೆಗಣಿಸಿ, ಹಣದ ಬಲ ಹೊಂದಿರುವವರಿಗೆ ಪ್ರಮುಖ ಹುದ್ದೆಗಳನ್ನು ನೀಡಲಾಗಿದೆ ಎಂದು ಕೆಲ ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಇಲ್ಲಿ ಯಾರು ಕಾರ್ಯಕರ್ತರು ಇಲ್ಲ ಎಲ್ಲರೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳೆಂದೇ ಹೇಳಿಕೊಂಡು ಓಡಾಡ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು. ಮುಂದಿನ ಕೆಪಿಸಿಸಿ ಅಧ್ಯಕ್ಷರು ಇಂತಹವನ್ನು ಬ್ರೇಕ್ ಹಾಕಬೇಕೆಂದು ಒತ್ತಾಯ ಮಾಡಿದರು.

Edited By :
Kshetra Samachara

Kshetra Samachara

03/06/2026 01:33 pm

Cinque Terre

39.99 K

Cinque Terre

0

ಸಂಬಂಧಿತ ಸುದ್ದಿ