ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಕಂಪನಿಗೆ ನುಗ್ಗಿ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು...!

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕರ ಗುಂಪೊಂದು, ಕಂಪನಿಯ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿ ತಾಲೂಕಿನ ಕೊಟಗೊಂಡಹುಣಸಿ ಗ್ರಾಮದ ಸಾಯಿ ಕಂಪನಿಯಲ್ಲಿ ನಡೆದಿದೆ.

ಹೌದು,, ಅದರಗುಂಚಿ ಗ್ರಾಮದ ಕಾರ್ತಿಕ ಹಾಗೂ ಆತನ ಸಹಚರರು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸೋನು ಕುಮಾರ, ದಿನೇಶ್ ಸಾಹಾನಿ, ರವಿ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಂಜೆ ವೇಳೆ ಕಾರ್ಮಿಕರು ಎಂದಿನಂತೆ ಕೆಲಸದಲ್ಲಿ ನಿರತರಾಗಿದ್ದಾಗ, ಕಾರ್ತಿಕ ಎಂಬಾತ ಮದ್ಯದ ಅಮಲಿನಲ್ಲಿ ಕಂಪನಿಗೆ ಬಂದು ಕಾರ್ಮಿಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಕಾರ್ಮಿಕರ ವಿರುದ್ಧ ಆಕ್ರೋಶಗೊಂಡ ಆತ, ತನ್ನ ಸಹಚರರನ್ನು ಕರೆಸಿ ಕಟ್ಟಿಗೆಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾನೆ ಎಂದು ಗಾಯಾಳು ಕಾರ್ಮಿಕರು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ಕಾರ್ಮಿಕರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈರಣ್ಣ ವಾಲಿಕಾರ, ಕ್ರೈಂ ಬ್ಯೂರೋ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/06/2026 02:01 pm

Cinque Terre

59.34 K

Cinque Terre

0

ಸಂಬಂಧಿತ ಸುದ್ದಿ