ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಆಗ್ರಹ, ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಪ್ರತಿಭಟನೆ

ಹುಬ್ಬಳ್ಳಿ: ಸತತವಾಗಿ ಗೆಲುವು ಸಾಧಿಸುತ್ತಿರುವ ಶಾಸಕ ಪ್ರಸಾದ್ ಅಬ್ಬಯ್ಯ ಅವರನ್ನು ಮಂತ್ರಿ ಮಾಡಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಟೈಯರ್‌ಗೆ ಬೆಂಕಿ ಹಚ್ಚಿ ರಸ್ತೆ ಬಂದ್ ಮಾಡಿ ಹೋರಾಟ ಮಾಡಿದರು.

ಹುಬ್ಬಳ್ಳಿಯ ಇಂಡಿಪಂಪ್ ವೃತ್ತದಲ್ಲಿ ಪ್ರತಿಭಟನೆ‌ ಆರಂಭವಾಗಿದ್ದು, ರಸ್ತೆ ಬಂದ್ ಮಾಡಿ, ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತವಾಗಿದೆ. ಪ್ರಸಾದ್ ಅಬ್ಬಯ್ಯ ಸತತ ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.‌‌ ಮುಂಬೈ ಕರ್ನಾಟಕದಲ್ಲಿ ಕಳೆದ 30 ವರ್ಷಗಳಿಂದ ದಲಿತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ದಲಿತ ಸಮುದಾಯದ ಕೋಟಾದಡಿ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು. 2 ನೇ ಹಂತದಲ್ಲಿಯಾದ್ರೂ ಸಚಿವ ಸ್ಥಾನ ನೀಡಬೇಕು. ಸಚಿವ ಸ್ಥಾನ ಕೊಡದೆ ಹೋದ್ರೆ ಉಗ್ರ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ನೀಡಿ, ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

03/06/2026 04:20 pm

Cinque Terre

10.19 K

Cinque Terre

0

ಸಂಬಂಧಿತ ಸುದ್ದಿ