ಉಡುಪಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿಕೆಶಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ನಗರದ ಕಿನ್ನಿಮೂಲ್ಕಿ ಪ್ರದೇಶದಲ್ಲಿ ಬುಧವಾರ ಸಂಜೆ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ನೂತನ ಮುಖ್ಯಮಂತ್ರಿಗೆ ಜೈಕಾರ ಕೂಗಿ ಸಂತಸ ವ್ಯಕ್ತಪಡಿಸಿದ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು.
ರಾಜ್ಯಕ್ಕೆ ಹೊಸ ನಾಯಕತ್ವ ದೊರೆತಿರುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಾಗೂ ಜನಪರ ಆಡಳಿತದ ನಿರೀಕ್ಷೆಯನ್ನು ಕಾರ್ಯಕರ್ತರು ವ್ಯಕ್ತಪಡಿಸಿದರು.
PublicNext
03/06/2026 07:07 pm
LOADING...