ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಷಾರ್ ಗಿರಿನಾಥ್, ರಾಜೇಂದ್ರ ಚೋಳನ್‌ಗೆ ಡಬಲ್ ಜವಾಬ್ದಾರಿ: ಸಿಎಂ ಕಚೇರಿಯಲ್ಲಿ ಮಹತ್ವದ ಹೆಜ್ಜೆ

ಬೆಂಗಳೂರು: ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಕಚೇರಿಗೆ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ತುಷಾರ್ ಗಿರಿನಾಥ್ ಹಾಗೂ ಕಾರ್ಯದರ್ಶಿಯಾಗಿ ರಾಜೇಂದ್ರ ಚೋಳನ್ ಅವರನ್ನು ನೇಮಿಸಲಾಗಿದೆ.

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ತುಷಾರ್ ಗಿರಿನಾಥ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಅವರು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಜವಾಬ್ದಾರಿಯನ್ನೂ ಮುಂದುವರಿಸಲಿದ್ದಾರೆ.

ಇದೇ ವೇಳೆ, ಉಪಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿದ್ದ ರಾಜೇಂದ್ರ ಚೋಳನ್ ಅವರನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಇದರ ಜೊತೆಗೆ, ಅವರಿಗೆ ಕೆಪಿಸಿಎಲ್ (KPCL) ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನೂ ವಹಿಸಲಾಗಿದೆ. ಈ ಹುದ್ದೆಯ ಹೆಚ್ಚುವರಿ ಉಸ್ತುವಾರಿಯಲ್ಲಿದ್ದ ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ಈ ಜವಾಬ್ದಾರಿಯಿಂದ ವಿಮುಕ್ತಗೊಳಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Edited By : Nagaraj Tulugeri
PublicNext

PublicNext

03/06/2026 10:39 pm

Cinque Terre

4.54 K

Cinque Terre

0

ಸಂಬಂಧಿತ ಸುದ್ದಿ