ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಕಳೆದ ಮೇ 29 ರಂದು ಗೋವಿಂದಪುರದಲ್ಲಿ ಜಮೀನು ವಿವಾದ ಹಿನ್ನೆಲೆ ನಡೆದಿದ್ದ ಭೀಕರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೆ ಪ್ರಮುಖ ಆರೋಪಿ ಸೇರಿ 6 ಜನರನ್ನು ಬಂಧಿಸಲಾಗಿದೆ.
ಅಪ್ಪುಗೌಡ, ಲಗಮನಗೌಡ @ ಲಕ್ಕನಗೌಡ ಪಾಟೀಲ (49 ) ಶಂಕ್ರೆಪ್ಪ, ಮಾದೇವ ಅರಕೇರಿ (33) ಅಪ್ಪಾಸಾಬ @ ಕಿಶನ್, ಶಂಕರ ಭೋವಿ (56) ಸತ್ಯೆಪ್ಪ, ಜಕ್ಕಪ್ಪ ಬಿರಾದಾರ( 46) ಸುಲ್ತಾನ, ಮಾದೇವ ಬಿರಾದಾರ, (24) ಮಹೇಶ ತಂ. ಬೆಳ್ಳೆಣ್ಣಿ ಬಿರಾದಾರ, (25 ) ಬಂಧಿತ ಆರೋಪಿಗಳಾಗಿದ್ದಾರೆ.
ಗೋವಿಂದಪುರದಲ್ಲಿ ಜಮೀನು ವಿವಾದ ಹಿನ್ನೆಲೆ ನಡೆದಿದ್ದ ಭೀಕರ ಹತ್ಯಾಕಾಂಡದಲ್ಲಿ ಚಂದ್ರಕಾಂತ ನಿರಾಳೆ ಆತನ ಮಕ್ಕಳಾದ ಸಮರ್ಥ ಹಾಗೂ ರಾಹುಲ್, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ ಹಾಗೂ ಶಬ್ಬಿರ್ ಅತ್ತಾರ್ ಭೀಕರವಾಗಿ ಕೊಲೆ ಮಾಡಲಾಗಿತ್ತು.
ಜೂನ್ 1 ರಂದು ಪ್ರಮುಖ ಆರೋಪಿ ಕಲ್ಲನಗೌಡ ಪಾಟೀಲ್ ಸೇರಿ 12 ಆರೋಪಿಗಳನ್ನು ಬಂಧಿಸಲಾಗಿತ್ತು. ತನಿಖೆ ವೇಳೆ ಇನ್ನಷ್ಟು ಆರೋಪಿಗಳ ಪಾತ್ರ ಬೆಳಕಿಗೆ ಬಂದ ಹಿನ್ನೆಲೆ ಇಂದು ಪ್ರಮುಖ ಆರೋಪಿ ಅಪ್ಪುಗೌಡ ಪಾಟೀಲ್ ಸೇರಿದಂತೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳ ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಗೋವಿಂದಪುರ ಹತ್ಯಾಕಾಂಡ ಪ್ರಕರಣದಲ್ಲಿ ಇದುವರೆಗೆ ಒಟ್ಟು 18 ಆರೋಪಿಗಳ ಬಂಧನ ಮಾಡಲಾಗಿದ್ದು ಆರೋಪಿತರ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಲಾಗಿರುತ್ತದೆ ಎಂದು ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.
ಪಬ್ಲಿಕ್ ನೆಕ್ಸ್ಟ್, ವಿಜಯಪುರ
PublicNext
04/06/2026 02:43 pm