ಚಿಕ್ಕಮಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಅವರು ವಿದ್ಯಾರ್ಥಿ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.
ರಾಜ್ಯದ ವಿದ್ಯಾರ್ಥಿಗಳಿಗೆ 'ಉಚಿತ ಬಸ್ ಪಾಸ್' ಯೋಜನೆಯನ್ನು ಪ್ರಕಟಿಸುವ ಮೂಲಕ ತಮ್ಮ ಮೊದಲ ನಿರ್ಧಾರದಲ್ಲೇ ಭರವಸೆಯ ಮುದ್ರೆ ಒತ್ತಿದ್ದಾರೆ. ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಅಭೂತಪೂರ್ವ ಬೆಂಬಲ ಮತ್ತು ಸಂತಸ ವ್ಯಕ್ತವಾಗಿದೆ.
ಇದುವರೆಗೆ ಕೇವಲ ವಿದ್ಯಾರ್ಥಿನಿಯರಿಗಷ್ಟೇ ಸೀಮಿತವಾಗಿದ್ದ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಇದೀಗ ವಿದ್ಯಾರ್ಥಿಗಳಿಗೂ ವಿಸ್ತರಿಸಿರುವುದು ಯುವ ಸಮೂಹದಲ್ಲಿ ಹೊಸ ಸಂಚಲನ ಮೂಡಿಸಿದೆ.
ಸರ್ಕಾರದ ಈ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಚಿಕ್ಕಮಗಳೂರಿನ ಜ್ಯೂನಿಯರ್ ಕಾಲೇಜು ಹುಡುಗರು, ನೂತನ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಪ್ರತಿದಿನ ಬಸ್ ಪ್ರಯಾಣಕ್ಕಾಗಿ ದೊಡ್ಡ ಮೊತ್ತದ ಹಣ ವ್ಯಯಿಸುತ್ತಿದ್ದ ತಮಗೆ ಈ ಯೋಜನೆ ದೊಡ್ಡ ಆಸರೆಯಾಗಿದೆ ಎಂದು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಬಸ್ ವೆಚ್ಚಕ್ಕೆ ಉಳಿಯುವ ಹಣವನ್ನು ತಮ್ಮ ಮಧ್ಯಾಹ್ನದ ಊಟ ಹಾಗೂ ವಿದ್ಯಾಭ್ಯಾಸದ ಅಗತ್ಯ ಪರಿಕರಗಳನ್ನು ಕೊಳ್ಳಲು ಬಳಸಿಕೊಳ್ಳಬಹುದು ಎಂದು ಅವರು ಖುಷಿ ಹಂಚಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ, ಪ್ರತಿಯೊಂದು ಸಣ್ಣ ನಿರ್ವಹಣೆಗೂ ಪೋಷಕರ ಮೇಲೆ ಅವಲಂಬಿತರಾಗುವುದು ಇದರಿಂದ ತಪ್ಪುತ್ತದೆ ಎನ್ನುತ್ತಾ, ಈ ಯೋಜನೆ ವಿದ್ಯಾರ್ಥಿ ಜೀವನದ ಆರ್ಥಿಕ ಹೊರೆಯನ್ನು ಗಣನೀಯವಾಗಿ ತಗ್ಗಿಸಲಿದೆ ಎಂದು ವಿದ್ಯಾರ್ಥಿ ವೃಂದ ಹರ್ಷ ವ್ಯಕ್ತಪಡಿಸಿದೆ.
PublicNext
04/06/2026 04:16 pm
LOADING...