ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಶಿರಾಗೇಟ್ 80 ಅಡಿ ರಸ್ತೆ ಕಾಮಗಾರಿಯ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ-3 ರ ಶಿರಾಗೇಟ್ ಪ್ರದೇಶದಲ್ಲಿ 80 ಅಡಿ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು 14 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದ್ದು, ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಅವರು ಇಂದು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಸುಮಾರು 1.1 ಕಿಲೋ ಮೀಟರ್ ಉದ್ದದ ಈ ರಸ್ತೆ ಕಾಮಗಾರಿಯಡಿ ಎಲ್ಲಾ ಸಾರ್ವಜನಿಕ ಉಪಯುಕ್ತತೆಯ ಹಾಗೂ ಗುಣಮಟ್ಟದ ಡಾಂಬರು ರಸ್ತೆಯನ್ನು ನಿರ್ಮಿಸಲಾಗುತ್ತಿದೆ. ಅಲ್ಲದೆ, ರಸ್ತೆ ಬದಿಗಳಲ್ಲಿ ಮುಚ್ಚಳದ ಸ್ಲ್ಯಾಬ್‌ಗಳೊಂದಿಗೆ ಆಧುನಿಕ ಚರಂಡಿಗಳು, ಪಾದಚಾರಿಗಳ ಸುರಕ್ಷಿತ ಸಂಚಾರಕ್ಕಾಗಿ ಪೇವರ್ ಅಳವಡಿಸಿದ ಕಾಲುದಾರಿಗಳನ್ನು ನಿರ್ಮಿಸಲಾಗುತ್ತಿದೆ. ನಗರದ ಪ್ರಮುಖ ಪ್ರವೇಶ ಮಾರ್ಗಗಳಲ್ಲಿ ಒಂದಾದ ಶಿರಾಗೇಟ್ ರಸ್ತೆಯನ್ನು ಸುಗಮ ಹಾಗೂ ಸುಸಜ್ಜಿತ ನಗರ ಮೂಲಸೌಕರ್ಯವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕಾಮಗಾರಿಗೆ ಈಗಾಗಲೇ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ.

ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಹಾಗೂ ಟೆಂಡರ್ ನಿಯಮಾವಳಿಗಳಿಗೆ ಅನುಸಾರವಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
PublicNext

PublicNext

05/06/2026 09:28 am

Cinque Terre

3.74 K

Cinque Terre

0