ಗದಗ: ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ನಾಕಾದಲ್ಲಿ ಎಚ್.ಕೆ.ಪಾಟೀಲ ಅಭಿಮಾನಿ ಬಳಗದ ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಚಿವ ಸಂಪುಟದಲ್ಲಿ ಎಚ್.ಕೆ.ಪಾಟೀಲ ಮತ್ತು ವಿಧಾನಪರಿಷತ್ತಿನ ಸದಸ್ಯರಾದ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಬಿತ್ತಿಪತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಉತ್ತರ ಕರ್ನಾಟಕದ ದಿಗ್ಗಜ ನಾಯಕ ಸರಳ ಸಜ್ಜನ ರಾಜಕಾರಣಿ ಎಚ್.ಕೆ.ಪಾಟೀಲ ಅವರಿಗೆ ಹಾಗೂ ಕಳೆದ ಇಪ್ಪತ್ತು ವರ್ಷಗಳಿಂದಲೂ ವಿಧಾನಪರಿಷತ್ತಿನ ಸದಸ್ಯರಾಗಿ ಅಲ್ಪಸಂಖ್ಯಾತರ ಪ್ರತಿನಿಧಿಯಾಗಿರುವ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಲೇ ಬೇಕು ಪಕ್ಷ ಅಧಿಕಾರದಲ್ಲಿ ಇರಲಿ ಇಲ್ಲದಿರಲಿ ಇಬ್ಬರೂ ನಾಯಕರು ಪಕ್ಷದ ಕಾರ್ಯಕರ್ತರಾಗಿ ಸದಾ ಪಕ್ಷದೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿ ಪಕ್ಷದ ಬೆಳವಣಿಗೆಗಾಗಿ ಸದಾ ಶ್ರಮಿಸಿದ್ದಾರೆ ಆದ್ದರಿಂದ ಕಾಂಗ್ರೆಸ್ ಪಕ್ಷದ ವರಿಷ್ಠರು ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.
Kshetra Samachara
05/06/2026 05:58 pm
LOADING...