ಸಿದ್ದಾಪುರ: ಸಿದ್ದಾಪುರ-ಜೋಗ ರಸ್ತೆಯ ಪಡವನಬೈಲ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ವಿದ್ಯುತ್ ಕಂಬ ಬಿದ್ದು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಆದರೆ, ಬೈಕ್ ಸವಾರ ಹಣಜೀರಿಯ ದೇವೇಂದ್ರ ಗೊಂಡ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೇವೇಂದ್ರ ಗೊಂಡ ಅವರು ಜೋಗ ರಸ್ತೆಯಿಂದ ತಮ್ಮ ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಲಿಸುತ್ತಿದ್ದ ಅವರ ಬೈಕ್ ಮೇಲೆ ವಿದ್ಯುತ್ ಕಂಬ ಬಿದ್ದ ಪರಿಣಾಮ, ಅವರು ಬೈಕ್ ಸಮೇತ ಕೆಳಗೆ ಬಿದ್ದಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಗೊಂಡಿದ್ದ ದೇವೇಂದ್ರ ಅವರಿಗೆ ಪ್ರಾಥಮಿಕ ಆರೈಕೆ ಮಾಡಿದ್ದಾರೆ. ಈ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದಾರೆ.
Kshetra Samachara
06/06/2026 04:20 pm
LOADING...