ಬಳ್ಳಾರಿ: ಲಾರಿಯೊಂದು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಹೆಚ್ ಆರ್ ಜಿ ವೃತ್ತದ ಬಳಿ ನಡೆದಿದೆ.
ಲಾರಿ ಚಾಲಕ ಅತಿವೇಗವಾಗಿ ಲಾರಿ ಚಲಾಯಿಸಿದ ಪರಿಣಾಮ ಬೈಕ್ ಗೆ ಡಿಕ್ಕಿ ಹೊಡೆದಿದೆ. ಯುವಕನನ್ನು ಜೋಳದರಾಶಿ ವೀರೇಶ್ ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳೀಯರು ಮತ್ತು ಪೊಲೀಸರು ಬಿಮ್ಸ್ ಆಸ್ಪತ್ರೆಗೆ ಸೇರಿಸಿದರಾದರೂ ಅಷ್ಟೋತ್ತಿಗಾಗಲೇ ವೀರೇಶ್ ಸಾವನ್ನಪ್ಪಿದ್ದಾನೆ.
ಈ ಕುರಿತು ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
06/06/2026 04:57 pm
LOADING...