ಬಾಗಲಕೋಟೆ :ಬಾಗಲಕೋಟೆ ತಾಲ್ಲೂಕಿನ ಹೊಸೂರು ಕ್ರಾಸ್ ಬಳಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಸುಮಾರು 20 ಕ್ವಿಂಟಲ್ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ, ಎರಡು ವಾಹನಗಳನ್ನು ತಡೆದು ಪರಿಶೀಲನೆ ನಡೆಸಿದರು. ಈ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವುದು ಪತ್ತೆಯಾಗಿ, ಅಕ್ಕಿ ಹಾಗೂ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಯಿತು.
ಕಾರ್ಯಾಚರಣೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಾಗಲಕೋಟೆ ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ನಿರ್ದೇಶನದ ಮೇರೆಗೆ ನಡೆದ ದಾಳಿಯಲ್ಲಿ ಆಹಾರ ಶಿರಸ್ತೇದಾರ ಎಸ್.ಆರ್. ಗಯ್ಯಾಳಿ, ಆಹಾರ ನಿರೀಕ್ಷಕ ಪ್ರಕಾಶ್ ಶೇರಖಾನೆ, ಕಂದಾಯ ಇಲಾಖೆ ಸಿಬ್ಬಂದಿ ಕಾಶಿಮ್ ಬಂಗಾರಗೊಂಡ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ವಶಪಡಿಸಿಕೊಂಡ ಅಕ್ಕಿ ಮತ್ತು ವಾಹನಗಳನ್ನು ಬಾಗಲಕೋಟೆ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.
PublicNext
06/06/2026 07:31 pm
LOADING...