ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ

ಮಡಿಕೇರಿ: ಭಾರತ ಚುನಾವಣಾ ಆಯೋಗವು ದಿನಾಂಕ:14-05-2026ರ ಪತ್ರಿಕಾ ಪ್ರಕಟಣೆಯ ಮೂಲಕ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ಕೈಗೊಳ್ಳಲು ಕಾರ್ಯಕ್ರಮ ವೇಳಾಪಟ್ಟಿ ಹೊರಡಿಸಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕೋರಿದ್ದಾರೆ.

ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆಗೆ ಅರ್ಹತಾ ದಿನಾಂಕ 2026 ಅಕ್ಟೋಬರ್ 1 ನ್ನು ಘೋಷಿಸಿದ್ದು, ಜೂ.20 ರಿಂದ 29ರ ವರೆಗೆ ಪೂರ್ವತಯಾರಿ, ತರಬೇತಿ ಮತ್ತು ಮುದ್ರಣಕ್ಕೆ ಅವಕಾಶ ಕಲ್ಪಿಸಿದೆ. ಜೂ.30 ರಿಂದ ಜು.29ರ ವರೆಗೆ ಮತಗಟ್ಟೆ ಅಧಿಕಾರಿಯಿಂದ ಮನೆಮನೆ ಭೇಟಿ ಹಾಗೂ ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ, ಆಗಸ್ಟ್, 5 ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ. ಆ.5 ರಿಂದ ಸೆ.4ರ ವರೆಗೆ ಹಕ್ಕು ಮತ್ತು ಆಕ್ಷೇಪಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದೆ. ಜೊತೆಗೆ ಆ.5 ರಿಂದ ಅಕ್ಟೋಬರ್, 03 ರವರೆಗೆ ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಅಕ್ಟೋಬರ್, 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳಲಿದೆ ಎಂದು ಎಸ್.ಜೆ.ಸೋಮಶೇಖರ್ ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯ ಸಂಪೂರ್ಣ ಮಾಹಿತಿ ಇಂತಿದೆ: ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಕರ್ನಾಟಕ ರಾಜ್ಯದಲ್ಲಿ ಕೊನೆಯದಾಗಿ 2002 ನೇ ಸಾಲಿನಲ್ಲಿ ನಡೆಸಲಾಗಿದೆ. ಭಾರತದ ಸಂವಿಧಾನದ ಅನುಚ್ಛೇದ 324 ರ ಸೆಕ್ಷನ್ 21 ರನ್ವಯ, ಪ್ರಜಾ ಪ್ರತಿನಿಧಿ ಕಾಯ್ದೆ 1950 ರನ್ವಯ ಹಾಗೂ ಮತದಾರರ ನೋಂದಣಿ ನಿಯಮಗಳು, 1960 ಗಳಲ್ಲಿ ಲಭ್ಯವಿರುವ ನಿಬಂಧನೆಗಳ ಆಧಾರದ ಮೇಲೆ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಳ್ಳಲಾಗಿದೆ.

ಈ ಬಾರಿಯ ವಿಶೇಷ ಸಮಗ್ರ ಪರಿಷ್ಕರಣೆಯ ಅರ್ಹತಾ ದಿನಾಂಕವಾಗಿ 01.10.2026 ಅನ್ನು ನಿಗದಿಪಡಿಸಲಾಗಿದೆ. ಭಾರತ ಚುನಾವಣಾ ಆಯೋಗವು 2021 ರ ಡಿಸೆಂಬರ್ ಮಾಹೆಯಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ 1950 ರ ನಿಯಮ 14ಬಿ ಗೆ ತರಲಾದ ತಿದ್ದುಪಡಿಯಂತೆ 1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್ ದಿನಾಂಕಗಳನ್ನು ಅರ್ಹತಾ ದಿನಾಂಕಗಳಾಗಿ ನಿಗದಿಪಡಿಸಲಾಗಿದೆ.

’ಎಸ್‍ಐಆರ್‍ನ ಗುರಿ: ಯಾವುದೇ ಅರ್ಹ ಮತದಾರರನ್ನು ಕೈಬಿಡುವಂತಿಲ್ಲ. ಯಾವುದೇ ಅನರ್ಹ ವ್ಯಕ್ತಿಯನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವಂತಿಲ್ಲ.’

ಎಸ್‍ಐಆರ್‍ನ ಪ್ರಮುಖ ಹಂತಗಳು: ಪೂರ್ವತಯಾರಿ, ತರಬೇತಿ ಮತ್ತು ಮುದ್ರಣ ಹಂತ, ಮನೆ ಮನೆಗೆ ಭೇಟಿ ಹಂತ, ಮತಗಟ್ಟೆಗಳ ಪುನರ್ ವಿಂಗಡಣೆ ಕಾರ್ಯ ಹಂತ, ಕರಡು ಮತದಾರರ ಪಟ್ಟಿಯ ಪ್ರಕಟಣೆ ಹಂತ, ಸೂಚನೆ ಹಂತ/ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಹಂತ ಹಾಗೂ ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ ಹಂತ.

ಪೂರ್ವ ತಯಾರಿ, ತರಬೇತಿ ಮತ್ತು ಮುದ್ರಣ: ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ, ಮತದಾರರ ನೋಂದಣಾಧಿಕಾರಿಗಳಿಗೆ, ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ, ಚುನಾವಣಾ ತಹಶೀಲ್ದಾರರುಗಳಿಗೆ, ಮಾಸ್ಟರ್ ತರಬೇತುದಾರರಿಗೆ ಮತ್ತು ಟೆಕ್ನಿಕಲ್ ಪ್ರೋಗ್ರಾಮರ್ ಅವರಿಗೆ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಮತ್ತು ಐಟಿ ಅಪ್ಲಿಕೇಶನ್ ಬಗ್ಗೆ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ತರಬೇತಿ ನೀಡಲಾಗಿದೆ.

ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಬೂತ್ ಮಟ್ಟದ ಅಧಿಕಾರಿಗಳ ಮೇಲ್ವಿಚಾರಕರಿಗೆ ತರಬೇತಿಯನ್ನು ಮತದಾರರ ನೋಂದಣಾಧಿಕಾರಿಗಳು ನೀಡಲಿದ್ದಾರೆ. ಗಣತಿ ನಮೂನೆ ಮತ್ತು ಘೋಷಣೆ ಪತ್ರವನ್ನು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಮುದ್ರಿಸಿ ಸರಬರಾಜು ಮಾಡಲಾಗುತ್ತದೆ. ಮನೆ ಮನೆ ಭೇಟಿ ಪೂರ್ವದಲ್ಲಿ ನಮೂನೆಗಳನ್ನು ಬಿಎಲ್‍ಒಗೆ ಒದಗಿಸಲಾಗುವುದು ಎಂದು ತಿಳಿಸಿದರು.

Edited By : PublicNext Desk
PublicNext

PublicNext

07/06/2026 07:17 am

Cinque Terre

5.64 K

Cinque Terre

0

ಸಂಬಂಧಿತ ಸುದ್ದಿ