ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೊಸ ಅಯೋಧ್ಯೆ ಗ್ರಾಮದಲ್ಲಿ ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ 18 ವರ್ಷದ ಯುವಕನೋರ್ವ ತನ್ನ ಸ್ವಂತ ತಂದೆ ಮತ್ತು ಅಕ್ಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ತಾಯಿಯ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಈ ಘಟನೆ ಇಡೀ ಗ್ರಾಮದಲ್ಲಿ ಆಘಾತ ಮೂಡಿಸಿದೆ.
ಕೊಲೆಯಾದವರನ್ನು ವೆಂಕಟ ನಾಯ್ಡು (45) ಮತ್ತು ಅವರ 19 ವರ್ಷದ ಮಗಳು ಪ್ರಗತಿ ಎಂದು ಗುರುತಿಸಲಾಗಿದೆ. ಈ ಭೀಕರ ಕೃತ್ಯ ಎಸಗಿದ ಆರೋಪಿ ಸಾಯಿ ವೆಂಕಟ ಮಣಿದೀಪ, ವೆಂಕಟ ನಾಯ್ಡು ಅವರ ಪುತ್ರ. ದಾಳಿಯಿಂದ ಗಂಭೀರ ಗಾಯಗೊಂಡಿರುವ ತಾಯಿ ಸೌಜನ್ಯಾ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿ ಸಾಯಿ ವೆಂಕಟ ಚಾಕು ಇರಿದ ಪರಿಣಾಮ ಪ್ರಗತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ತಂದೆ ವೆಂಕಟ ನಾಯ್ಡು ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
PublicNext
07/06/2026 11:30 am
LOADING...