ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಟಕ್ಕೆ ತೆರಳುವ ಮುನ್ನ ಮಾಹಿತಿ ಪಡೆಯಿರಿ: ಅರಣ್ಯ ಇಲಾಖೆಯ ಮನವಿ

ಸಕಲೇಶಪುರ: ತಾಲೂಕಿನ ಉದೇವರ ಗ್ರಾಮದ ಗುಡಬೆಟ್ಟ ಎಸ್ಟೇಟ್ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು.

ಈ ವೇಳೆ ಕಾಡಾನೆಗಳು ಇರುವ ಪ್ರಸ್ತುತ ಸ್ಥಳದ ಮಾಹಿತಿ ಪಡೆದು, ಮಧು ಅವರ ತೋಟಕ್ಕೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರಿಗೆ ಕಾಡಾನೆಗಳ ಚಲನವಲನ ಕುರಿತು ಜಾಗೃತಿ ಮೂಡಿಸಲಾಯಿತು. ಕಾಡಾನೆಗಳ ಉಪಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿದ ಅಧಿಕಾರಿಗಳು, ತೋಟಗಳಿಗೆ ತೆರಳುವ ಮುನ್ನ ಅರಣ್ಯ ಇಲಾಖೆಯಿಂದ ಮಾಹಿತಿ ಪಡೆದು ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದರು.

ಕಾಡಾನೆಗಳ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ.

Edited By : Nirmala Aralikatti
Kshetra Samachara

Kshetra Samachara

07/06/2026 01:52 pm

Cinque Terre

760

Cinque Terre

0

ಸಂಬಂಧಿತ ಸುದ್ದಿ